SHIVAMOGGA LIVE NEWS | 28 ಫೆಬ್ರವರಿ 2022
ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಮತ್ತು ಹಿಂಬಾಕಿ ಇರುವ ಹುದ್ದೆಗಲಿಗೆ ಅರ್ಜಿ ಆಹ್ವಾನಿಸಲಾಗಿದೆ. 27 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಅರ್ಜಿಗಳನ್ನು ಶಿವಮೊಗ್ಗ ಜಿಲ್ಲಾ ನ್ಯಾಯಾಲಯದ ವೆಬ್‍ಸೈಟ್ https://districts.ecourts.gov.in/shivamogga/online-recruitment ಅಥವಾ http://karnatakajudiciary.kar.nic.in/districtrecruitment.asp ನಲ್ಲಿ ನೀಡಲಾದ ಲಿಂಕ್ ಮೂಲಕ ಫೆ.25 ರಿಂದ ಮಾರ್ಚ್ 24 ರವರೆಗೆ ಸಲ್ಲಿಸಬಹುದು.
ಅರ್ಹತೆ ಏನು?
ಕನಿಷ್ಠ 18 ವರ್ಷ ಹಾಗೂ ಸಾಮಾನ್ಯ ವರ್ಗಕ್ಕೆ ಗರಿಷ್ಟ 35, 2ಎ, 2ಬಿ, 3ಎ, 3ಬಿ 38 ವರ್ಷಗಳು ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಕ್ಕೆ ಗರಿಷ್ಟ 40 ವರ್ಷ ವಯೋಮಿತಿಯೊಳಗೆ ಇರಬೇಕು. 10 ನೇ ತರಗತಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಕನ್ನಡ ಓದಲು ಮತ್ತು ಬರೆಯಲು ಬರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 200 ರೂ., ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು 100 ರೂ.ನ್ನು ನೀಡಲಾದ ಲಿಂಕ್ ಮೂಲಕ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸ್ಟೇಟ್ ಬ್ಯಾಂಕ್ ಕಲೆಕ್ಟ್ ಮೂಲಕ ಪಾವತಿಸತಕ್ಕದ್ದು.
ಆನ್‍ಲೈನ್ ಮೂಲಕ ಪಾವತಿ ಮಾಡಲು ಇಚ್ಚಿಸದೇ ಇರುವ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್‍ಸೈಟ್‍ನಿಂದ ಡೌನ್‍ಲೋಡ್ ಮಾಡಿಕೊಳ್ಳಬೇಕು. ಅದರ ಪ್ರಿಂಟ್ ಔಟ್ ಪಡೆದುಕೊಂಡು ಎಸ್‍ಬಿಐ ಬ್ಯಾಂಕಿನ ಯಾವುದೇ ಶಾಖೆಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.
ಹುದ್ದೆಗಳ ವರ್ಗೀಕರಣ, ವೇತನಶ್ರೇಣಿ, ಅರ್ಜಿ ಸಲ್ಲಿಸುವ ವಿಧಾನ ಮತ್ತು ಇತರೆ ಸೂಚನೆಗಳು ಮತ್ತು ಹೆಚ್ಚಿನ ಮಾಹಿತಿಯನ್ನು ವೆಬ್‍ಸೈಟ್‍ಗೆ ಭೇಟಿ ನೀಡಿ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.