ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಏ.9 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನವನ್ನು (jobs) ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಮುತ್ತೂಟ್ ಮನಿ ಮತ್ತು ಮಾರುತಿ ಸುಜುಕಿ (ಅರೇನಾ) ಕಂಪನಿ ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಪಿಯುಸಿ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ : ದುರ್ಗಿಗುಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ, ಯಾವಾಗ? ಯಾರಿಗೆಲ್ಲ ಅವಕಾಶವಿದೆ?
ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ಮೊಬೈಲ್ ಸಂಖ್ಯೆ 9380663606 / 9108235132 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LATEST NEWS
- ಶಿವಮೊಗ್ಗ ಜಿಲ್ಲಾಧಿಕಾರಿ ದಿಢೀರ್ ಭೇಟಿ, ಪ್ರಾಥಮಿಕ ಆರೋಗ್ಯ ಕೇಂದ್ರ, ಹಾಸ್ಟೆಲ್‌ನಲ್ಲಿ ಪರಿಶೀಲನೆ

- ಆಗುಂಬೆ ಸಮೀಪ ಕಾರು ಡಿಕ್ಕಿ, ವ್ಯಕ್ತಿ ಸ್ಥಳದಲ್ಲೆ ಸಾವು, ಹೇಗಾಯ್ತು ಘಟನೆ?

- ಶಿವಮೊಗ್ಗದಲ್ಲಿ ಮಹಿಳಾ ನೌಕರರಿಗೆ ಕ್ರೀಡೆ, ಮನರಂಜನಾ ಸ್ಪರ್ಧೆಗಳು, ಯಾವ್ಯಾವ ಸ್ಪರ್ಧೆಗಳಿವೆ?

- ಉದ್ಯೋಗ ಸುದ್ದಿ: ಪಿಯುಸಿ, ಪದವಿ ಆದವರಿಗೆ ಕೆಲಸವಿದೆ, ಏ.9ರಂದು ನೇರ ಸಂದರ್ಶನ, ಎಲ್ಲಿ?

- ಬಂಕ್ ಮಾಲೀಕರಿಗೆ ಶಿವಮೊಗ್ಗ ಜಿಲ್ಲಾಧಿಕಾರಿ ಖಡಕ್ ಎಚ್ಚರಿಕೆ, ಏನಿದು?

About The Editor
ನಿತಿನ್ ಆರ್.ಕೈದೊಟ್ಲು











