ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 9 DECEMBER 2022
ಶಿವಮೊಗ್ಗ : ಜಿಲ್ಲಾ ಕೌಶಲಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ ಡಿ.13ರ ಬೆಳಗ್ಗೆ 9.30ರಿಂದ ಸಂಜೆ 4ರ ವರೆಗೆ ಸಹ್ಯಾದ್ರಿ ಕಲಾ ಕಾಲೇಜಿನ ಆವರಣದಲ್ಲಿ ಉದ್ಯೋಗ ಮೇಳ (jobs mela) ಏರ್ಪಡಿಸಲಾಗಿದೆ. 30ಕ್ಕೂ ಹೆಚ್ಚಿನ ಪ್ರತಿಷ್ಠಿತ ಕಂಪನಿಗಳು ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ.
7ನೇ ತರಗತಿ, ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದಿರುವ ಶಿವಮೊಗ್ಗ, ಬೆಂಗಳೂರು ಹಾಗೂ ರಾಜ್ಯದ ಪ್ರಮುಖ ನಗರಗಳಲ್ಲಿ ಕಾರ್ಯನಿರ್ವಹಿಸಲು ಆಸಕ್ತಿಯುಳ್ಳವರು ಆನ್‌ಲೈನ್‌ನಲ್ಲಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಲೋಕಾಯುಕ್ತ ಪೊಲೀಸರ ದಾಳಿ, ಲಂಚದ ಹಣ ಪಡೆಯುತ್ತಿದ್ದಾಗಲೇ ಸಿಕ್ಕಿಬಿದ್ದ ಅಧಿಕಾರಿ
ಸ್ವವಿವರದ 10 ಪ್ರತಿಗಳು ಹಾಗೂ ಭಾವಚಿತ್ರದೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಎಚ್.ಎಂ.ಸುರೇಶ್ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ http://skillconnect.kaushalkar.com/candidatereg ಅಥವಾ ಮೊ. 8197176710 ಸಂಪರ್ಕಿಬಹುದು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422