ಶಿವಮೊಗ್ಗ ಲೈವ್
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ವತಿಯಿಂದ ಸೆಪ್ಟೆಂಬರ್ 18 ರಂದು ನೇರ ಸಂದರ್ಶನ ಆಯೋಜಿಸಲಾಗಿದೆ. ಅಪೋಲೋ ಫಾರ್ಮಸಿ ಪ್ರೈವೇಟ್ ಲಿಮಿಟೆಡ್ ಮತ್ತು ಮುತ್ತೂಟ್ ಮೈಕ್ರೋ ಫಿನ್ ಪ್ರೈ.ಲಿ. ಕಂಪನಿಗಳು ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿವೆ.
ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಪಡೆದ 18 ರಿಂದ 35 ವರ್ಷ ವಯಸ್ಸಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಆಸಕ್ತರು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರವಾಗಿ ಹಾಜರಾಗಬಹುದು. ಸಂದರ್ಶನದಲ್ಲಿ ಪಾಲ್ಗೊಳ್ಳಲು ಯಾವುದೇ ಶುಲ್ಕವಿರುವುದಿಲ್ಲ.

ಶಿವಮೊಗ್ಗದ ಸಾಗರ ರಸ್ತೆಯ ಗುತ್ಯಪ್ಪ ಕಾಲೋನಿಯ ಪಂಪಾ ನಗರ 2ನೇ ಕ್ರಾಸ್ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9380663606 ಅಥವಾ 9108235132 ಸಂಖ್ಯೆಗೆ ಕರೆ ಮಾಡಬಹುದು.