ಶಿವಮೊಗ್ಗ: ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಅವರು ಆರಂಭಿಸಿರುವ ಉಚಿತ ಜಾಬ್ ಪೋರ್ಟಲ್ ಕಾಯಕ ಸೇತು ಮೂಲಕ ಬೃಹತ್ ನೇಮಕಾತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಫೋನ್ ತಯಾರಿಕಾ ಬಹುರಾಷ್ಟ್ರೀಯ ಕಂಪನಿಯಲ್ಲಿ (MNC) ಖಾಲಿ ಇರುವ 2,000ಕ್ಕೂ ಹೆಚ್ಚು ಹುದ್ದೆಗಳಿಗೆ ಶಿವಮೊಗ್ಗದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಯಾರೆಲ್ಲ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು?
18 ರಿಂದ 34 ವರ್ಷ ವಯಸ್ಸಿನ ಮಹಿಳೆಯರು ಅರ್ಜಿ ಸಲ್ಲಿಸಬಹುದು. 10ನೇ ತರಗತಿ, ಪಿಯುಸಿ, ಡಿಪ್ಲೊಮಾ, ಐಟಿಐ ಅಥವಾ ಯಾವುದೇ ಪದವಿ ಉತ್ತೀರ್ಣರಾದ ಅಥವಾ ಅನುತ್ತೀರ್ಣರಾದ ಅಭ್ಯರ್ಥಿಗಳೂ ಅರ್ಹರಾಗಿದ್ದಾರೆ. ಇನ್ನು, ನೇರ ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗುವುದು. ಆಯ್ಕೆಯಾದವರಿಗೆ ಉಚಿತ ವಸತಿ, ಊಟ, ಸಾರಿಗೆ, ಪಿಎಫ್, ಇಎಸ್ಐ ಹಾಗೂ 24 ಗಂಟೆ ವೈದ್ಯಕೀಯ ಸೌಲಭ್ಯ ಕಂಪನಿಯಿಂದಲೇ ಒದಗಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಂದರ್ಶನ ಎಲ್ಲಿ? ನೋಂದಣಿ ಹೇಗೆ?
ಜೂನ್ 8 ರಿಂದ 12ರವರೆಗೆ ವಿನೋಬನಗರದ ಮಹಾನಗರ ಪಾಲಿಕೆ ವಾಣಿಜ್ಯ ಸಂಕೀರ್ಣ, ವಲಯ-1, 2ನೇ ಮಹಡಿಯಲ್ಲಿ ಸಂದರ್ಶನ ನಡೆಯಲಿದೆ. ಆಸಕ್ತರು ಮುಂಚಿತವಾಗಿ 93797 22233 ಅಥವಾ 98800 05533 ಸಂಖ್ಯೆಗೆ ಕರೆ ಮಾಡಿ ನೋಂದಣಿ ಮಾಡಿಕೊಳ್ಳಬೇಕು ಎಂದು ಡಾ. ಧನಂಜಯ ಸರ್ಜಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
