ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ನವೆಂಬರ್ 2021
ಶಿವಮೊಗ್ಗದಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇಳ ಆಯೋಜಿಸಲಾಗುತ್ತಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ನವೆಂಬರ್ 30 ರಂದು ಬೆಳಿಗ್ಗೆ 10 ಗಂಟೆಗೆ ಸಾಗರ ರಸ್ತೆ ಗುತ್ಯಪ್ಪ ಕಾಲೋನಿ – ಪಂಪಾನಗರದ 2ನೇ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಏರ್ಪಡಿಸಿದೆ.
ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ ಹೊಂದಿದ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡಾಟ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-255293, ಮೊ. 9535312531 / 9482023412 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ