ಶಿವಮೊಗ್ಗ ಲೈವ್.ಕಾಂ | SHIMOGA NEWS | 8 ಸೆಪ್ಟಂಬರ್ 2020
ಹೊಳಲೂರಿನ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ಕುರಿತು 10 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ. ಆಸಕ್ತ ರೈತರು, ಕಾರ್ಮಿಕರು, ನಿರುದ್ಯೋಗಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ವಯೋಮಿತಿ ಏನು? ಅರ್ಹತೆಗಳೇನು?
ಅಭ್ಯರ್ಥಿಗಳು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು. 7ನೇ ತರಗತಿ ಉತ್ತೀರ್ಣರಾಗಿರಬೇಕು. ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು. ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿ ಯಾವಾಗಿಂದ ಶುರು?
ಸೆಪ್ಟೆಂಬರ್ 14ರಿಂದ ತರಬೇತಿ ಪ್ರಾರಂಭವಾಗಲಿದೆ. ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ ನಿರ್ದೇಶಕರು, ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ, ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು) ಇವರಿಗೆ ತಕ್ಷಣವೇ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9481955721, 9743429595, 9449371579, 9538271653 ಅಥವಾ ದೂರವಾಣಿ ನಂ: 08182-245721 ಸಂಪರ್ಕಿಸಬಹುದು.
https://www.facebook.com/liveshivamogga/videos/314546413130946/?t=1