SHIVAMOGGA LIVE NEWS | 2 FEBRUARY 2024
JOB 1 : ಶಿವಮೊಗ್ಗ ಮಹಾನಗರ ಪಾಲಿಕೆ
SHIMOGA : ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ 89 ಪೌರ ಕಾರ್ಮಿಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ವೇತನ ಶ್ರೇಣಿ 17 ಸಾವಿರ ರೂ. ನಿಂದ 28,950 ರೂ. ನಿಗದಿಪಡಿಸಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದವರಿಗೆ 15 ಹುದ್ದೆ, ಪರಿಶಿಷ್ಟ ಪಂಗಡ 7, ಪ್ರವರ್ಗ 1ಕ್ಕೆ 4, ಪ್ರವರ್ಗ 2Aಗೆ 13, ಪ್ರವರ್ಗ 2Bಗೆ 4, ಪ್ರವರ್ಗ 3Aಗೆ 3, ಪ್ರವರ್ಗ 3Bಗೆ 4, ಸಾಮಾನ್ಯ ವರ್ಗಕ್ಕೆ 39 ಹುದ್ದೆಗಳು ಖಾಲಿ ಇವೆ.
![]() |
ಮಹಾನಗರ ಪಾಲಿಕೆ ಆಯುಕ್ತರಿಂದ ಅರ್ಜಿ ಪಡೆದು ಫೆ.22ರ ಸಂಜೆ 5.30ರ ಒಳಗೆ ಸಲ್ಲಿಸಬೇಕಾಗಿದೆ. ಪರಿಶಿಷ್ಟ ಜಾತಿ, ಪಂಗಡ, ಅಂಗವಿಕಲ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 100 ರೂ. ಉಳಿದವರಿಗೆ ಅರ್ಜಿ ಶುಲ್ಕ 200 ರೂ. ನಿಗದಿಪಡಿಸಲಾಗಿದೆ.
JOB 2 : ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ
ಜಿಲ್ಲಾ ವ್ಯಾಪ್ತಿಯ 14 ಗ್ರಾಮ ಪಂಚಾಯಿತಿಗಳ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ, ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ, ರಿಪ್ಪನ್ಪೇಟೆ, ಶಿವಮೊಗ್ಗ ತಾಲ್ಲೂಕಿನ ತುಪ್ಪೂರು, ತೀರ್ಥಹಳ್ಳಿ ತಾಲ್ಲೂಕಿನ ತೂದೂರು, ಸಾಗರ ತಾಲ್ಲೂಕಿನ ಭೀಮನಕೋಣೆ ಇಲ್ಲಿ ಮೀಸಲಾತಿ ಅನ್ವಯ ಹುದ್ದೆಗಳು ಖಾಲಿ ಇದೆ.
ಅರ್ಜಿ ಸಲ್ಲಿಸಲು ಫೆ.23 ಕಡೆಯ ದಿನ. ಅರ್ಜಿಗಳನ್ನು 14 ಗ್ರಾ.ಪಂ ಕಚೇರಿಗಳಲ್ಲಿ ಮತ್ತು https://shimoga.nic.in ವೆಬ್ಸೈಟ್ನಲ್ಲಿ ಡೌನ್ಲೋಡ್ ಮಾಡಿ ಭರ್ತಿ ಮಾಡಬೇಕಿದೆ. ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಂಬಂಧಪಟ್ಟ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳಿಗೆ ನೇರವಾಗಿ ಸಲ್ಲಿಸಬಹುದು ಎಂದು ಗ್ರಾ.ಪಂ ಮೇಲ್ವಿಚಾರಕರ ನೇಮಕಾತಿ ಸಮಿತಿ ಸದಸ್ಯ ಕಾರ್ಯದರ್ಶಿ ತಿಳಿಸಿದ್ದಾರೆ.
JOB 3 : ಮ್ಯಾನ್ ಕೈಂಡ್ ಫಾರ್ಮಾ
ಮ್ಯಾನ್ ಕೈಂಡ್ ಫಾರ್ಮಾದ ವೆಟರಿನರಿ ಡಿವಿಷನ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧೆಡೆ ಹುದ್ದೆಗಳು ಖಾಲಿ ಇದೆ. ಆಸಕ್ತರು ಕೆಳಗಿರುವ ಜಾಹೀರಾತು ಗಮನಿಸಿ, ಅದರಲ್ಲಿರುವ ಮೇಲ್ ಐಡಿಗೆ ತಮ್ಮ ಸ್ವವಿವರ ಕಳುಹಿಸಬಹುದಾಗಿದೆ.
ಇದನ್ನೂ ಓದಿ – ಶಿವಮೊಗ್ಗ, ಸಾಗರ ತಹಶೀಲ್ದಾರ್ಗಳ ವರ್ಗಾವಣೆ, ಯಾರು ಹೊಸ ತಹಶೀಲ್ದಾರ್?
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200