ಶಿವಮೊಗ್ಗದ ಟೊಯೋಟಾ ಶೋ ರೂಂನಲ್ಲಿ ಕೆಲಸ ಇದೆ, ನಗರದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ

SHIVAMOGGA LIVE | 30 MAY 2023

SHIMOGA : ನಗರದ ಪ್ರತಿಷ್ಠಿತ ಶಕ್ತಿ ಟೊಯೋಟಾ ಶೋ ರೂಂನಲ್ಲಿ ಹುದ್ದೆಗಳು ಖಾಲಿ ಇದೆ. ಇನ್ನು, ಮೇ 31ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಇವುಗಳ ಸಂಪೂರ್ಣ ಮಾಹಿತಿ ಇಲ್ಲಿದೆ.

ಸುದ್ದಿಯ ಮುಂದಿನ ಭಾಗ ಕೆಳಗಿದೆ

ಸಂಸ್ಥೆ : ಶಕ್ತಿ ಟೊಯೋಟಾ

ಶಿವಮೊಗ್ಗದ ಶಕ್ತಿ ಟೊಯೋಟಾ ಶೋ ರೂಂನಲ್ಲಿ ವಿವಿಧ ಹುದ್ದೆಗಳು ಖಾಲಿ ಇದೆ. ಅಸಕ್ತರು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಮೊ. 7022979413 ಸಂಪರ್ಕಿಸಬಹುದು.

Shakti Toyota Showroom in Shimoga

Shivamogga Live Promotion

ಮೇ 31ರಂದು ಉದ್ಯೋಗ ಮೇಳ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮೇ 31ರ ಬೆಳಗ್ಗೆ 10 ಗಂಟೆಗೆ  ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಇತರೆ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉಚಿತ ಪ್ರವೇಶ ಇರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 08182-255293, 9380663606 ಮತ್ತು 9482023412, 9535312531 ಮೂಲಕ ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಬೆಳಗ್ಗೆಯಿಂದಲೆ ಗುಡುಗು ಸಹಿತ ಜೋರು ಮಳೆ, ತಗ್ಗಿದ ತಾಪಮಾನ

WATCH VIDEO

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment