SHIVAMOGGA LIVE NEWS | 26 DECEMBER 2022
ಶಿವಮೊಗ್ಗ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಡಿ. 28 ರಂದು ಬೆಳಗ್ಗೆ 10 ಗಂಟೆಯಿಂದ ಉದ್ಯೋಗ ಮೇಳ (udyoga mela) ಆಯೋಜಿಸಲಾಗಿದೆ.
ಪ್ರತಿಷ್ಠಿತ ಖಾಸಗಿ ಕಂಪನಿಗಳು ಮೇಳದಲ್ಲಿ (udyoga mela) ಭಾಗವಹಿಸಲಿವೆ. ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿರುವವರು ಮೇಳದಲ್ಲಿ ಭಾಗವಹಿಸಬಹುದು. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿ ತೆಗೆದುಕೊಂಡು ಸಂದರ್ಶನದಲ್ಲಿ ಭಾಗವಹಿಸಬಹುದು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಸರ್ಕಾರಿ ನೌಕರರಿಗೆ ನವ ಸಂವತ್ಸರ ಕಾರ್ಯಕ್ರಮ, ಬರಲಿದ್ದಾರೆ ಸರಿಗಮಪ ಖ್ಯಾತಿಯ ಗಾಯಕರು
ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಪಂಪಾನಗರ 2ನೇ ಅಡ್ಡರಸ್ತೆಯ ಗುತ್ಯಪ್ಪ ಕಾಲೋನಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ದೂರವಾಣಿ ಸಂಖ್ಯೆ 08182-255293 / 9380663606 / 9482023412 / 9535312531 ಗಳನ್ನು ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200