ಬ್ಯಾಂಕ್‌ ಉದ್ಯೋಗ: ಶಿವಮೊಗ್ಗದಲ್ಲಿ ಜುಲೈ 7ರಂದು ಉದ್ಯೋಗ ಮೇಳ, ಯಾವೆಲ್ಲ ಸಂಸ್ಥೆ ಭಾಗವಹಿಸ್ತಿವೆ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ವಾಟ್ಸಪ್‌ ಮಾಡಲು ಕೆಳಗಿರುವ ನಂಬರ್‌ ಮೇಲೆ ಕ್ಲಿಕ್‌ ಮಾಡಿ.

NEWS HIGHLIGHTS

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ 7ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಸಂದರ್ಶನದಲ್ಲಿ ಆದಿತ್ಯ ಬಿರ್ಲಾ ಕ್ಯಾಪಿಟಲ್ ಪ್ರೈ.ಲಿ. ಹಾಗೂ ಇಂಡಸ್ ಇಂಡ್ ಬ್ಯಾಂಕ್ ಪ್ರೈ.ಲಿ. ಸಂಸ್ಥೆಗಳು ಭಾಗವಹಿಸಲಿದ್ದು, ಖಾಲಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಿವೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪಾಸಾದ 18ರಿಂದ 35 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದು.

Shivamogga-Job-Update

ಆಸಕ್ತರು ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಹಾಜರಾಗಬೇಕು. ಪ್ರವೇಶ ಉಚಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 9380663606, 9108235132.

ಶಿವಮೊಗ್ಗ ಲೈವ್ ಅಪ್ಡೇಟ್ಸ್

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್ ಸೇರಿರಿ!