ಶಿವಮೊಗ್ಗದಲ್ಲಿ ಜೂನ್‌ 30ರಂದು ಉದ್ಯೋಗ ಮೇಳ, ಯಾರೆಲ್ಲ ಅರ್ಹರು? ಏನೆಲ್ಲ ದಾಖಲೆ ತರಬೇಕು?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ
NEWS HIGHLIGHTS

ಶಿವಮೊಗ್ಗ: ಇಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜೂನ್ 30ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ಉಚಿತ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ಖಾಸಗಿ ಕಂಪನಿಗಳಾದ ಸ್ವಮಾನ್ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್ ಹಾಗೂ ಐಬ್ಲೂ ಮ್ಯಾನ್‌ಪವರ್ ಸೆಕ್ಯೂರ್ ಸಲ್ಯೂಷನ್ಸ್ ಎಲ್‌ಎಲ್‌ಪಿ ಸಂಸ್ಥೆಗಳು ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿವೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿ ಪೂರ್ಣಗೊಳಿಸಿದ 18ರಿಂದ 40 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದು.

Shivamogga-Job-Update

ಆಸಕ್ತರು ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಸಾಗರ ರಸ್ತೆಯ ಪಂಪಾನಗರ 2ನೇ ಕ್ರಾಸ್‌ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಹಾಜರಾಗಬಹುದು. ಮಾಹಿತಿಗೆ 9380663606 ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.