ಕೆಲಸ ಖಾಲಿ ಇದೆ, ಶಿವಮೊಗ್ಗದಲ್ಲಿ ಆಗಸ್ಟ್‌ 29ರಂದು ನೇರ ಸಂದರ್ಶನ, ಇಲ್ಲಿದೆ ಡಿಟೇಲ್ಸ್

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಉದ್ಯೋಗ ಮಾಹಿತಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 29 ರಂದು ಶಿವಮೊಗ್ಗದಲ್ಲಿ ಖಾಸಗಿ ಕಂಪನಿಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ನೇರ ಸಂದರ್ಶನ ಆಯೋಜಿಸಲಾಗಿದೆ. ಪ್ರತಿಷ್ಠಿತ ಖಾಸಗಿ ಕಂಪನಿಗಳು ಈ ಸಂದರ್ಶನದಲ್ಲಿ ಭಾಗವಹಿಸಲಿವೆ ಎಂದು ಜಿಲ್ಲಾ ಉದ್ಯೋಗ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾರೆಲ್ಲ ಭಾಗವಹಿಸಬಹುದು?

ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಅಥವಾ ಯಾವುದೇ ಪದವಿ ಪಾಸಾದ 18 ರಿಂದ 35 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ಈ ನೇರ ಸಂದರ್ಶನದಲ್ಲಿ ಭಾಗವಹಿಸಲು ಅರ್ಹರಾಗಿದ್ದಾರೆ. ಆಸಕ್ತರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್‌ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸಂದರ್ಶನ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ 9380663606 ಅಥವಾ 9108235132 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

Shivamogga-Job-Update