ಜುಲೈ 13ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ, ಯಾರೆಲ್ಲ ಭಾಗವಹಿಸಬಹುದು? ಎಲ್ಲಿ?

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ 13ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸ್ವತಂತ್ರ ಮೈಕ್ರೋಫಿನ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಸಂದರ್ಶನದಲ್ಲಿ ಭಾಗವಹಿಸಲಿದೆ. ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹರನ್ನು ಆಯ್ಕೆ ಮಾಡಿಕೊಳ್ಳಲಿದೆ. ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ ಅಥವಾ ಯಾವುದೇ ಪದವಿ ತೇರ್ಗಡೆ ಹೊಂದಿರುವ 18 ರಿಂದ 30 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಲು ಅರ್ಹರಾಗಿದ್ದಾರೆ. ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ.

ಆಸಕ್ತರು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಸಾಗರ ರಸ್ತೆಯ ಪಂಪಾ ನಗರದ 2ನೇ ಕ್ರಾಸ್‌ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಹಾಜರಾಗಬಹುದು. ಪ್ರವೇಶ ಉಚಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9108235132 ಅಥವಾ 9380663606 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Shivamogga-Job-Update