ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್ 16ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗೆ ಉಚಿತ ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಸುದ್ದಿಯ ಮುಂದಿನ ಭಾಗ ಕೆಳಗಿದೆ
ರಾಹುಲ್ ಕಾರ್ಸ್ ಪ್ರೈವೇಟ್ ಲಿಮಿಟೆಡ್ (ಹುಂಡೈ) ಕಂಪನಿಯು ಭಾಗವಹಿಸಲಿದೆ. ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ. ಪಿಯುಸಿ, ಐಟಿಐ, ಬಿ.ಇ ಹಾಗೂ ಯಾವುದೇ ಪದವಿ ಪೂರೈಸಿದ 18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಲು ಅರ್ಹರಾಗಿದ್ದಾರೆ.

ಆಸಕ್ತರು ತಮ್ಮ ಬಯೋಡೇಟಾ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಾಗರ ರಸ್ತೆಯ ಗುತ್ಯಪ್ಪ ಕಾಲೋನಿ, ಪಂಪಾ ನಗರದ 2ನೇ ಕ್ರಾಸ್‌ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ: 9380663606 ಅಥವಾ 9108235132 ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

