ಶಿವಮೊಗ್ಗ ಲೈವ್
ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಅಕ್ಟೋಬರ್ 16 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗೆ ನೇರ ಸಂದರ್ಶನ ಆಯೋಜಿಸಲಾಗಿದೆ. ಪಿರಮಲ್ ಫೈನಾನ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಸಂದರ್ಶನದಲ್ಲಿ ಪಾಲ್ಗೊಳ್ಳುತ್ತಿದೆ. ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದೆ. (ಶಿವಮೊಗ್ಗ ಲೈವ್.ಕಾಂ | ಮುಂದಿನ 3 ಪ್ಯಾರಾಗಳು ಕೆಳಗಿವೆ)
ಯಾವುದೇ ಪದವಿ ತೇರ್ಗಡೆಯಾದ 18 ರಿಂದ 35 ವರ್ಷ ವಯಸ್ಸಿನ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಪ್ರವೇಶ ಉಚಿತವಿದ್ದು, ಆಸಕ್ತರು ತಮ್ಮ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ನೇರವಾಗಿ ಸಂದರ್ಶನಕ್ಕೆ ಹಾಜರಾಗಬಹುದು. ಸಂದರ್ಶನವು ಸಾಗರ ರಸ್ತೆಯ ಪಂಪಾ ನಗರ 2ನೇ ಕ್ರಾಸ್, ಗುತ್ಯಪ್ಪ ಕಾಲೋನಿಯಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9380663606 ಅಥವಾ 9108235132 ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
