ಪಿಯುಸಿ, ಪದವಿ ಓದಿದವರಿಗೆ ಶಿವಮೊಗ್ಗದಲ್ಲಿ ನೇರ ಸಂದರ್ಶನ, ಯಾವಾಗ? ಎಲ್ಲಿ?

ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ 29ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಶನದಲ್ಲಿ ಎಸ್.ಎಂ.ಎಫ್.ಈ. ಇಂಡಿಯಾ ಕ್ರೆಡಿಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಭಾಗವಹಿಸಿ ಖಾಲಿ ಇರುವ ಹುದ್ದೆಗಳಿಗೆ ನೇರ ಆಯ್ಕೆ ಪ್ರಕ್ರಿಯೆ ನಡೆಸಲಿದೆ. 18 ರಿಂದ 30 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಮಾತ್ರ ಪಾಲ್ಗೊಳ್ಳಲು ಅರ್ಹರಾಗಿದ್ದು, ಪ್ರವೇಶ ಉಚಿತವಿರುತ್ತದೆ. ಅಭ್ಯರ್ಥಿಗಳು ಪಿಯುಸಿ ಅಥವಾ ಯಾವುದೇ ಪದವಿಯಲ್ಲಿ ಉತ್ತೀರ್ಣರಾಗಿರಬೇಕು.

Shimoga-Jobs-General-Image

ಆಸಕ್ತರು ತಮ್ಮ ಬಯೋ-ಡೇಟಾ ಹಾಗೂ ಆಧಾರ್ ಕಾರ್ಡ್‌ ಪ್ರತಿಗಳೊಂದಿಗೆ ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ಸಂದರ್ಶನದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗಾಗಿ 9380663606 ಅಥವಾ 9108235132 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.