ಶಿವಮೊಗ್ಗ ಲೈವ್.ಕಾಂ | SHIMOGA | 16 ಮಾರ್ಚ್ 2020
ವಿಶ್ವವಿಖ್ಯಾತ ಜೋಗ ಜಲಪಾತಕ್ಕೂ ಕರೋನ ಬಿಸಿ ತಟ್ಟಿದೆ. ಕರೋನಾ ವೈರಸ್ ಆತಂಕದ ಹಿನ್ನೆಲೆಯಲ್ಲಿ ಜೋಗ ಜಲಪಾತದ ಗೇಟ್’ಗೆ ಬೀಗ ಹಾಕಲಾಗಿದೆ. ಪ್ರವಾಸಿಗರು ಬರುವುದನ್ನು ನಿರ್ಬಂಧಿಸಲು ಗೇಟ್ ಮುಚ್ಚಲಾಗಿದೆ.
ಜೋಗ ಜಲಪಾತ ವೀಕ್ಷಣೆಗೆ ರಾಜ್ಯ, ಹೊರ ರಾಜ್ಯ ಮತ್ತು ವಿದೇಶದಿಂದ ಪ್ರವಾಸಿಗರು ಆಗಮಿಸುವ ಹಿನ್ನೆಲೆ, ಗೇಟ್ ಬಂದ್ ಮಾಡಲಾಗಿದೆ. ಇದರ ಮಾಹಿತಿ ಇಲ್ಲದೆ ಬಂದ ಪ್ರವಾಸಿಗರು ನಿರಾಸೆ ಅನುಭವಿಸುತ್ತಿದ್ದಾರೆ.
ಕರೋನ ಸೋಂಕು ಹಬ್ಬುವುದನ್ನು ತಡೆಗಟ್ಟುವ ಹಿನ್ನೆಲೆ ರಾಜ್ಯ ಸರ್ಕಾರ ನಿರ್ಬಂಧ ವಿಧಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಆದೇಶದ ಹಿನ್ನೆಲೆ, ಜೋಗ ಜಲಪಾತ ವೀಕ್ಷಣೆಯನ್ನು ಅನಿರ್ದಿಷ್ಟಾವಧಿಗೆ ಬಂದ್ ಮಾಡಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]