SHIVAMOGGA LIVE | 19 JULY 2023
SHIMOGA : ರಾಜ್ಯಪಾಲ (Governor) ಥಾವರ್ ಚಂದ್ ಗೆಹ್ಲೋಟ್ ಅವರು ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಜು.21 ಮತ್ತು 22ರಂದು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಈ ವೇಳೆ ಎರಡು ವಿಶ್ವವಿದ್ಯಾಲಯಗಳ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ರಾಜ್ಯಪಾಲರ ಭೇಟಿಯ ವಿವರ
ರಾಜ್ಯಪಾಲ (Governor) ಥಾವರ್ ಚಂದ್ ಗೆಹ್ಲೋಟ್ ಅವರು ಜು.21ರಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ರಾಜಭವನದಿಂದ ನಿರ್ಗಮಿಸಲಿದ್ದಾರೆ. ಚಿತ್ರದುರ್ಗ ಮಾರ್ಗವಾಗಿ ಮಧ್ಯಾಹ್ನ 1.45ಕ್ಕೆ ಶಿವಮೊಗ್ಗ ತಲುಪಲಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ.
ಮಧ್ಯಾಹ್ನ 3.45ಕ್ಕೆ ಇರುವಕ್ಕಿಯಲ್ಲಿರುವ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕ ವಿಶ್ವವಿದ್ಯಾಲಯಕ್ಕೆ ತೆರಳಲಿದ್ದಾರೆ. ಸಂಜೆ 4 ಗಂಟೆಗೆ 8ನೇ ಘಟಿಕೋತ್ಸವದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 5.45ಕ್ಕೆ ಹೊರಟು ಭದ್ರಾ ಜಲಾಶಯದ ಸಮೀಪ ಇರುವ ಜಂಗಲ್ ಲಾಡ್ಜ್ ರೆಸಾರ್ಟ್ನಲ್ಲಿ ತಂಗಲಿದ್ದಾರೆ.
ಜು.22ರಂದು ಬೆಳಗ್ಗೆ 6.30ರಿಂದ 8.30ರವರೆಗೆ ಭದ್ರಾ ಅಭಯಾರಣ್ಯದಲ್ಲಿ ಜೀಪ್ನಲ್ಲಿ ಸಫಾರಿಗೆ ತೆರಳಲಿದ್ದಾರೆ. ಜಂಗಲ್ ಲಾಡ್ಜ್ಗೆ ಹಿಂತಿರುಗಿ ಬೆಳಗ್ಗೆ 9.45ಕ್ಕೆ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಆವರಣದಲ್ಲಿನ ಬಸವ ಸಭಾ ಭವನಕ್ಕೆ ಆಗಮಿಸಲಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಪುನರ್ವಸು ಮಳೆ ಅಬ್ಬರ, ಬುಡಮೇಲಾದ ಮರಗಳು, ಕರೆಂಟ್ ಕಟ್, ಎಲ್ಲೆಲ್ಲಿ ಹೇಗಿದೆ ಪರಿಸ್ಥಿತಿ?
ಬೆಳಗ್ಗೆ 10 ಗಂಟೆಯಿಂದ 11.30ರವರೆಗೆ ಕುವೆಂಪು ವಿಶ್ವವಿದ್ಯಾಲಯದ 33ನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ಬೆಳಗ್ಗೆ 11.35 ಘಟಿಕೋತ್ಸವದ ಕಾರ್ಯಕ್ರಮದಿಂದ ನಿರ್ಗಮಿಸಲಿದ್ದಾರೆ. ಚಿತ್ರದುರ್ಗದ ಮೂಲಕ ಬೆಂಗಳೂರಿನ ರಾಜಭವನಕ್ಕೆ ತೆರಳಲಿದ್ದಾರೆ.
