ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 21 ಡಿಸೆಂಬರ್ 2019
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ವಿಶ್ವವಿದ್ಯಾನಿಲಯಗಳ ಮಟ್ಟದ ಖೋ ಖೋ ಕದನಕ್ಕೆ ಸಾಕ್ಷಿಯಾಗಲು ಕುವೆಂಪು ವಿಶ್ವವಿದ್ಯಾನಿಲಯ ಸಜ್ಜಾಗುತ್ತಿದೆ. ಡಿಸೆಂಬರ್ 23ರಿಂದ ದಕ್ಷಿಣ ವಲಯ ವಿಶ್ವವಿದ್ಯಾಲಯಗಳ ಮಟ್ಟದ ಪಂದ್ಯಾವಳಿ ನಡೆಯಲಿದೆ. 74 ವಿವಿಗಳ ಖೋ ಖೋ ಟೀಂಗಳು ಇದರಲ್ಲಿ ಪಾಲ್ಗೊಳ್ಳಲಿವೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕುವೆಂಪು ವಿವಿ ಕುಲಪತಿ ಪ್ರೊ.ಬಿ.ಪಿ.ವೀರಭದ್ರಪ್ಪ, ದಕ್ಷಿಣ ವಲಯ ವಿಶ್ವವಿದ್ಯಾಲಯಗಳ ಖೋ ಖೋ ಪಂದ್ಯಾವಳಲ್ಲಿ ಕರ್ನಾಟಕದ 23, ಆಂಧ್ರಪ್ರದೇಶದ 17, ತೆಲಂಗಾಣದ 9, ಕೇರಳದ 4, ತಮಿಳುನಾಡಿನ 20 ಮತ್ತು ಪಾಂಡಿಚೇರಿಯ 1 ತಂಡಗಳು ಭಾಗವಹಿಸಲಿವೆ. ಡಿ.23ರಂದು ಸಚಿವ ಸಿ.ಟಿ.ರವಿ, ಶಾಸಕರಾದ ಬಿ.ಕೆ.ಸಂಗಮೇಶ್ವರ, ಡಿ.ಎಸ್.ಸುರೇಶ್ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದರು.
ಡಿ.26ರಂದು ಸಮಾರೋಪ ಸಮಾರಂಭ ನಡೆಯಲಿದೆ. ಸಚಿವ ಕೆ.ಎಸ್.ಈಶ್ವರಪ್ಪ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಡಿ.28ರಂದು ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಖೋ ಖೋ ಪಂದ್ಯಾವಳಿ ನಡೆಯಲಿದೆ. ನಾಲ್ಕು ಜೋನ್’ಗಳಲ್ಲಿ ಮೊದಲು ನಾಲ್ಕು ಸ್ಥಾನ ಗಳಿಸಿದ ಒಟ್ಟು 16 ತಂಡಗಳು ಗೆಲುವಿಗಾಗಿ ಸೆಣೆಸಾಡಲಿವೆ. ಆ ದಿನ ಬೆಳಗ್ಗೆ 9 ಗಂಟೆಗೆ ಪಂದ್ಯಾವಳಿಗಳು ಆರಂಭವಾಗಲಿವೆ. ಸಂಸದ ಬಿ.ವೈ.ರಾಘವೇಂದ್ರ, ಅರ್ಜುನ ಪ್ರಶಸ್ತಿ ವಿಜೇತ ಖೋ ಖೋ ಪ್ಲೇಯರ್ ಶೋಭಾ ನಾರಾಯಣ್ ಭಾಗವಹಿಸಲಿದ್ದಾರೆ. ಡಿ.30ರಂದು ಸಮಾರೋಪ ಸಮಾರಂಭ ನಡೆಯಲಿದೆ ಎಂದರು.
ಸಿಂಡಿಕೇಟ್ ಸದಸ್ಯ ಬಳ್ಳೇಕೆರೆ ಸಂತೋಷ್, ಡಾ.ಎನ್.ಡಿ.ವಿರೂಪಾಕ್ಷ, ಸಾರ್ವಜನಿಕ ಸಂಪರ್ಕಾಧಿಕಾರಿ ಸತ್ಯಪ್ರಕಾಶ್ ಸುದ್ದಿಗೋಷ್ಟಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
Kuvempu University to host south zone university level Kho Kho tournament from December 23 said Vice Chancellor Veerabhadrappa.