ಶಿವಮೊಗ್ಗ ಲೈವ್.ಕಾಂ | ಶಂಕರಘಟ್ಟ | 20 ಸೆಪ್ಟೆಂಬರ್ 2019

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತವರು ಕ್ಷೇತ್ರ ಶಿಕಾರಿಪುರದಲ್ಲಿ ಕುವೆಂಪು ವಿಶ್ವವಿದ್ಯಾಲಯ ಸ್ನಾತಕೋತ್ತರ ಕೇಂದ್ರ ತೆರೆಯಲು ನಿರ್ಧರಿಸಿದೆ. ಮುಂದಿನ ಶೈಕ್ಷಣಿಕ ವರ್ಷದಿಂದಲೆ ಕೇಂದ್ರ ಆರಂಭಿಸಲು ವಿದ್ಯಾ ವಿಷಯಕ ಪರಿಷತ್ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುವೆಂಪು ವಿವಿ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ, ಗ್ರಾಮಿಣ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸು ನನಸಾಗಿಸುವ ಉದ್ದೇಶದಿಂದ ಮತ್ತೊಂದು ಸ್ನಾತಕೋತ್ತರ ಕೇಂದ್ರ ತೆರೆಯಲಾಗುತ್ತಿದೆ. ಕೇಂದ್ರಕ್ಕೆ ಅಗತ್ಯವಾದ ಭೂಮಿ, ಕಟ್ಟಡ ಮತ್ತಿತರೆ ಮೂಲಸೌಲಭ್ಯಕ್ಕಾಗಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತದೆ ಎಂದರು.
ಕುಲಸಚಿವ ಪ್ರೊ.ಎಸ್.ಎಸ್.ಪಾಟೀಲ್, ಪರೀಕ್ಷಾಂಗ ಕುಲಸಚಿವ ಪ್ರೊ. ವೆಂಕಟೇಶ್ವರಲು, ಹಣಕಾಸು ಅಧಿಕಾರಿ ಪ್ರೊ. ಹಿರೇಮಣಿ ನಾಯ್ಕ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]