SHIVAMOGGA LIVE NEWS | 18 NOVEMBER 2023
KARGAL : ಮಹಾತ್ಮ ಗಾಂಧಿ ವಿದ್ಯುದಾಗಾರಕ್ಕೆ ತೆರಳುವ ರಸ್ತೆಯಲ್ಲಿ ಹೆಣ್ಣು ಚಿರತೆಯ (Leopard) ಶವ ಪತ್ತೆಯಾಗಿದೆ. ವಿಚಾರ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಶವ ಪರೀಕ್ಷೆ ವೇಳೆ ಚಿರತೆಯ ಕುತ್ತಿಗೆ ಬಳಿ ಹಲ್ಲಿನ ಗುರುತು ಕಂಡು ಬಂದಿದೆ. ಎರಡು ಚಿರತೆಗಳ ಮಧ್ಯೆ ಕಾದಾಟದಲ್ಲಿ ಹೆಣ್ಣು ಚಿರತೆ ಮೃತಪಟ್ಟಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಶವ ಪರೀಕ್ಷೆಯ ವರದಿ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ. ಜೋಗದ ನೇಚರ್ ಕ್ಯಾಂಪ್ನಲ್ಲಿ ಚಿರತೆಯ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಕಾರ್ಗಲ್ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅಗಸೆ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ್ ಕುಮಾರ್, ಕೆಂಚಪ್ಪನವರ್, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಧರ್, ಉಪ ವಲಯ ಅರಣ್ಯಾಧಿಕಾರಿ ಮೈಲಾರಪ್ಪ, ಚಾಲಕ ಪ್ರಕಾಶ್ ಸೇರಿದಂತೆ ಹಲವರು ಇದ್ದರು.