ಶಿವಮೊಗ್ಗ ಲೈವ್.ಕಾಂ | 2 ಮಾರ್ಚ್ 2019
ಲೋಕಸಭೆ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಅವರ ಹುಟ್ಟುಹಬ್ಬವನ್ನು, ಶಿವಮೊಗ್ಗದ ಜೆಡಿಎಸ್ ಕಚೇರಿಯಲ್ಲಿ ಇವತ್ತು ಆಚರಿಸಲಾಯಿತು. ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಎಂ.ಮಂಜುನಾಥಗೌಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಂಜುನಾಥಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಮತ್ತು ಲೋಕಸಭೆ ಚುನಾವಣೆಯಲ್ಲಿ ಮಧು ಬಂಗಾರಪ್ಪ ಅವರನ್ನು ಗೆಲ್ಲಿಸುವತ್ತ ಎಲ್ಲರೂ ಪಣತೊಡಬೇಕು ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದರು.
https://www.youtube.com/watch?v=T28w9dC1z9Y&feature=youtu.be
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
