ಶಿವಮೊಗ್ಗ ಲೈವ್.ಕಾಂ | ಸಾಗರ | 1 ಆಗಸ್ಟ್ 2019
ಶಾಸಕ ಹರತಾಳು ಹಾಲಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಸಾಗರದ ಆರ್ಯ ಈಡಿಗರ ಸಂಘ ಒತ್ತಾಯಿಸಿದೆ.
ಹಾಲಪ್ಪ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಜಿಲ್ಲೆಯಲ್ಲಿ ಅತಿ ಹೆಚ್ಚು ಸಂಖ್ಯೆಯಲ್ಲಿರುವ ಈಡಿಗ ಸಮುದಾಯಕ್ಕೆ ನ್ಯಾಯ ಒದಗಿಸಿದಂತೆ ಆಗಲಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಸಿ.ಪರಶುರಾಮಪ್ಪ ತಿಳಿಸಿದ್ದಾರೆ.
ಈಡಿಗ ಸಮುದಾಯ, ರಾಜ್ಯದಲ್ಲಿ ನಾಲ್ಕನೇ ಅತಿ ದೊಡ್ಡ ಸಮುದಾಯವಾಗಿದೆ. ಈ ಸಮುದಾಯದಿಂದ ಆಯ್ಕೆಯಾಗಿರುವ ಹರತಾಳು ಹಾಲಪ್ಪ, ಮುರು ಬಾರಿ ಶಾಸಕರಾಗಿದ್ದಾರೆ. ಒಮ್ಮೆ ಸಚಿವರಾಗಿ ಉತ್ತಮ ಕಾರ್ಯವನ್ನು ಮಾಡಿದ್ದಾರೆ. ಪದವೀಧರ ಮತ್ತು ಪ್ರಬುದ್ಧ ರಾಜಕಾರಣಿ ಆಗಿರುವುದರಿಂದ ಹಾಲಪ್ಪ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]
