ಶಿವಮೊಗ್ಗ ಲೈವ್.ಕಾಂ | SHIMOGA | 12 ಫೆಬ್ರವರಿ 2020
ಶಿವಮೊಗ್ಗದಲ್ಲಿ ಮತ್ತೆ ಪೊಲೀಸರು ಬಂದೂಕು ಸದ್ದು ಮಾಡಿದೆ. ಕುಖ್ಯಾತ ರೌಡಿ ಶೀಟರ್ ಮಾರ್ಕೆಟ್ ಲೋಕಿ ಮೇಲೆ ಫೈರಿಂಗ್ ಮಾಡಿದ್ದಾರೆ.
ಮಾರ್ಕೆಟ್ ಲೋಕಿ ಎಡಗಾಲಿಗೆ ಗುಂಡು ತಗುಲಿದೆ. ಶಿವಮೊಗ್ಗ ತಾಲೂಕು ಅಬ್ಬಲಗೆರೆ ಬಳಿ ಮಾರ್ಕೆಟ್ ಲೋಕಿ ಇರುವ ಖಚಿತ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಾಚರಣೆಗೆ ಇಳಿದ ಪೊಲೀಸರ ಮೇಲೆ ದಾಳಿ ನಡೆದಿದೆ ಎನ್ನಲಾಗಿದೆ.
ಈ ವೇಳೆ ಪೊಲೀಸರು ಫೈರಿಂಗ್ ಮಾಡಿದ್ದು, ಮಾರ್ಕೆಟ್ ಲೋಕಿ ಎಡಗಾಲಿಗೆ ಗುಂಡು ತಗುಲಿದೆ.
ಘಟನೆಯಲ್ಲಿ ಪೊಲೀಸ್ ಪೇದೆ ಒಬ್ಬರಿಗು ಗಾಯವಾಗಿದೆ. ದೊಡ್ಡಪೇಟೆ ಠಾಣೆ ಪೇದೆ ಕಿರಣ್ ಮೋರೆಗೆ ಗಾಯವಾಗಿದೆ. ಕಿರಣ್ ಅವರ ಬಲಗಾಲು ಮತ್ತು ಬಲಗೈಗೆ ಗಾಯವಾಗಿದೆ.
ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
