ಶಿವಮೊಗ್ಗ ಲೈವ್.ಕಾಂ | SHIMOGA | 16 ಮಾರ್ಚ್ 2020
ಕರೋನ ವೈರಸ್ ಭೀತಿಯ ನಡುವೆ ಶಿವಮೊಗ್ಗ ಜಿಲ್ಲೆಯಾದ್ಯಂತ ಹಲವು ಮೆಡಿಕಲ್ ಶಾಪ್’ಗಳಲ್ಲಿ ಅಧಿಕ ಬೆಲೆಗೆ ಮಾಸ್ಕ್ ಮಾರಾಟ ಮಾಡುತ್ತಿರುವ ಆರೋಪವಿದೆ. ಇಂತಹ ವ್ಯಾಪಾರಿಗಳಿಗೆ ಬಿಸಿ ಮುಟ್ಟಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ನಿಗದಿಗಿಂತಲೂ ಅಧಿಕ ಬೆಲೆಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಕೆ ನೀಡಿದ್ದಾರೆ.
2020ರ ಜೂನ್ 30ರವರೆಗೆ ಮಾಸ್ಕನ್ನು ಅಗತ್ಯ ವಸ್ತುಗಳ ವ್ಯಾಪ್ತಿಗೆ ತರಲಾಗಿದೆ. ಈ ಸಂಬಂಧ ಕೇಂದ್ರ ಸರ್ಕಾರದ ಆದೇಶ ಹೊರಡಿಸಿದೆ. ಹಾಗಾಗಿ ಕೃತಕ ಅಭಾವ ಸೃಷ್ಟಿಸಿ, ಮಾಸ್ಕ್ ದರವನ್ನು ಹೆಚ್ಚಳ ಮಾಡಿ ಮಾರಾಟ ಮಾಡಿದರೆ, ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ.
ಅಗತ್ಯಕ್ಕಿಂತಲೂ ಹೆಚ್ಚಿನ ದರಕ್ಕೆ ಮಾಸ್ಕ್ ಮಾರಾಟ ಮಾಡಿದ್ದು ಕಂಡು ಬಂದರೆ, ಅಗತ್ಯ ವಸ್ತುಗಳ ಕಾಯ್ದೆ 1955 ಮತ್ತು ಪೊಟ್ಟಣ ಸಾಧನಗಳ ಕಾಯ್ದೆ 2009ರ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗುತ್ತದೆ ಎಂದು ಜಿಲ್ಲಾಧಿಕಾರಿ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಈ ಸಂಬಂಧ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು ಎಂದು ಸೂಚಿಸಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]