ಶಿವಮೊಗ್ಗ ಲೈವ್.ಕಾಂ | SAGARA | 22 ಅಕ್ಟೋಬರ್ 2019
ಶಿವಮೊಗ್ಗ, ಶಿಕಾರಿಪುರ ತಾಲೂಕುಗಳಿಗೆ ಹೋಲಿಸಿದೆ ಸಾಗರದಲ್ಲಿ ನೆರೆ ಪರಿಹಾರ ವಿತರಣೆಯಲ್ಲಿ ವಿಳಂಬವಾಗುತ್ತಿದೆ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಆರೋಪಿಸಿದ್ದಾರೆ.
ತ್ಯಾಗರ್ತಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಡೆದ ಜನಸ್ಪಂದನಾ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಹಕ್ರೆ, ಅಧಿಕಾರಿಗಳು ಸರಿಯಾದ ಮಾಹಿತಿಯನ್ನು ನೀಡದೆ ಇರುವುದೆ ಪರಿಹಾರ ವಿತರಣೆ ವಿಳಂಬಕ್ಕೆ ಕಾರಣ ಎಂದು ಆರೋಪಿಸಿದರು.
ಕೆಲವು ಕಡೆ ಕಂದಾಯ ಇಲಾಖೆ ಅಧಿಕಾರಿಗಳು ನಡೆಸಿದ ಸಮೀಕ್ಷೆಯಲ್ಲಿ ಲೋಪವಾಗಿದೆ. ಇದರಿಂದಾಗಿ ಅರ್ಹ ಫಲಾನುಭವಿಗಳು ಪರಿಹಾರ ವಂಚಿತವಾಗಿದ್ದಾರೆ. ಕೂಡಲೆ ಇದನ್ನು ಸರಿಪಡಿಸಬೇಕು ಎಂದು ಒತ್ತಾಯಿಸಿದರು.
ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಅಶೋಕ್ ಬರದವಳ್ಳಿ, ತ್ಯಾಗರ್ತಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರಾಮಕೃಷ್ಣ, ಉಪಾಧ್ಯಕ್ಷೆ ಲೀಲಾವತಿ, ವಿವಿಧ ಇಲಾಖೆ ಅಧಿಕಾರಿಗಳು, ಪಿಡಿಒ ಮಂಜಾನಾಯ್ಕ ಸೇರಿದಂತೆ ಹಲವರು ಸಭೆಯಲ್ಲಿ ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]