ಶಿವಮೊಗ್ಗ ಲೈವ್.ಕಾಂ | SHIMOGA NEWS | 10 ಸೆಪ್ಟೆಂಬರ್ 2021
ಶಿವಮೊಗ್ಗದಲ್ಲಿ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಐದು ಖಾಸಗಿ ಕಂಪನಿಗಳು ಈ ಮೇಳದಲ್ಲಿ ಭಾಗವಹಿಸುತ್ತಿವೆ. ಎಸ್ಸೆಸ್ಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಹಾಗೂ ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು.
18 ರಿಂದ 35 ವರ್ಷದೊಳಗಿನ ಆಕಾಂಕ್ಷಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಖಲಂದರ್ ಖಾನ್ ತಿಳಿಸಿದ್ದಾರೆ.
ಸೆಪ್ಟೆಂಬರ್ 14ರಂದು ಬೆಳಗ್ಗೆ 10 ಗಂಟೆಯಿಂದ ಮಿನಿ ಉದ್ಯೋಗ ಮೇಳ ಆರಂಭವಾಗಲಿದೆ. ಸಾಗರ ರಸ್ತೆಯ ಗುತ್ಯಪ್ಪ ಕಾಲೋನಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇಳ ನಡೆಯಲಿದೆ. ನೇರ ಸಂದರ್ಶನದ ಇರಲಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ 08182 255294 ಅಥವಾ 9535312531 ಮೊಬೈಲ್ ನಂಬರ್ ಸಂಪರ್ಕಿಸಬಹುದು.
(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200