SHIVAMOGGA LIVE NEWS | SHIMOGA | 14 ಜುಲೈ 2022
ಶಿವಮೊಗ್ಗ ಜಿಲ್ಲೆಯಾದ್ಯಂತ ನಿರಂತರ ಮಳೆಗೆ (RAIN EFFECT) ಆಸ್ತಿಪಾಸ್ತಿ ನಷ್ಟವಾಗಿದೆ. ಜಿಲ್ಲಾ ಉಸ್ತುವಾರಿ (MINISTER) ಸಚಿವ ಕೆ.ಸಿ.ನಾರಾಯಣ ಗೌಡ ಅವರು ಇವತ್ತು ಶಿವಮೊಗ್ಗಕ್ಕೆ ಭೇಟಿ ನೀಡಿದ್ದು, ಮಳೆ ಹಾನಿ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.
ಪ್ರವಾಸಿ ಮಂದಿರದಲ್ಲಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಲಕ್ಷ್ಮೀಪ್ರಸಾದ್, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣ ಗೌಡ ಅವರು ಸಭೆ ನಡೆಸಿ, ಮಳೆ ಹಾನಿ ಕುರಿತು ಮಾಹಿತಿ ಪಡೆದರು.
‘ಜಿಲ್ಲೆಯಲ್ಲಿ ಈವರೆಗೂ 201 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 90 ಮನೆಗಳಿಗೆ ದೊಡ್ಡ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. 27 ಕೊಟ್ಟಿಗೆಗಳು ಹಾನಿ ಆಗಿದೆ. 285 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ ಸಂಭವಿಸಿದೆ. 6 ಜಾನುವಾರುಗಳಿಗೆ ಹಾನಿ ಉಂಟಾಗಿದೆ. ಹೊಸನಗರ ತಾಲೂಕು ಪುರಪ್ಪೆಮನೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಬೆಲಗೋಡು ವ್ಯಾಪ್ತಿಯ ಗಣಪತಿ ಎಂಬುವವರು ಸಾವನ್ನಪ್ಪಿದ್ದಾರೆ’ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಸಚಿವರಿಗೆ ಮಾಹಿತಿ ನೀಡಿದರು.
ಅಧಿಕಾರಿಗಳ ಜೊತೆಗಿನ ಸಭೆ ಬಳಿಕ ಸಚಿವ ಕೆ.ಸಿ.ನಾರಾಯಣಗೌಡ ಅವರು ಮಳೆ ಹಾನಿ ಪ್ರದೇಶಗಳಿಗೆ ತೆರಳಲಿದ್ದು, ಪರಿಶೀಲನೆ ನಡೆಸಲಿದ್ದಾರೆ.
ಇದನ್ನೂ ಓದಿ – ಹೊಸನಗರದ ಸಾವೇಹಕ್ಲು ಜಲಾಶಯ ಓವರ್ ಫ್ಲೋ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.