ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 22 ಮೇ 2020
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸಾಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ದೂರನ್ನು ಆಧರಿಸಿ ಪಿಎಸ್ಐ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವುದು ಸರಿಯೋ ತಪ್ಪೋ ಎಂಬ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸುವುದಾಗಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಈಶ್ವರಪ್ಪ, ಕರೋನಾ ತಡೆಯಲು ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷ ಒಂದಾಗಿ ಹೋರಾಟ ನಡೆಸುತ್ತಿರುವಾಗ ಸೋನಿಯಾಗಾಂಧಿ ನೀಡಿರುವ ಹೇಳಿಕೆ ದೇಶದ ಪ್ರತಿಯೊಬ್ಬರಿಗೂ ನೋವು ತಂದಿದೆ. ದೂರು ದಾಖಲಾದ ಕೂಡಲೇ ಎಫ್ ಐಆರ್ ದಾಖಲಿಸಬೇಕು ಎಂದಿಲ್ಲ. ಆದರೆ ಪೊಲೀಸ್ ಅಧಿಕಾರಿ ಎಫ್ ಐಆರ್ ದಾಖಲಿಸದಿದ್ದರೆ ತನ್ನ ಮೇಲೆಯೇ ಕ್ರಮ ಜರುಗಿಸುತ್ತಾರೆನೋ ಎಂಬ ಭಯದಲ್ಲಿ ಎಫ್ ಐಆರ್ ದಾಖಲಿಸಿರಬಹುದು ಎಂದರು.
ಸೋನಿಯಾ ಗಾಂಧಿ ಜನರ ಕ್ಷಮೆ ಕೇಳಬೇಕು ಎಂದು ನಾನು ಹೇಳುತ್ತಿಲ್ಲ. ಹಾಗೆಯೆ ಪೊಲೀಸ್ ಅಧಿಕಾರಿ ಎಫ್ ಐಆರ್ ದಾಖಲಿಸಿರುವುದು ಸರಿಯೋ ತಪ್ಪೋ ಎಂದೂ ನಾನು ಹೇಳುವುದಿಲ್ಲ ಎಂದು ಈಶ್ವರಪ್ಪ ಹೇಳಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]