SHIVAMOGGA LIVE NEWS | 26 JANUARY 2023
SHIMOGA| ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ (airport work) ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರು ಭೇಟಿ ನೀಡಿ ಕಾಮಗಾರಿ ಪರಿಶೀಲನೆ ನಡೆಸಿದರು.
ವಿಮಾನ ನಿಲ್ದಾಣದ ಟರ್ಮಿನಲ್, ರನ್ ವೇ, ಏರ್ ಟ್ರಾಫಿಕ್ ಕಂಟ್ರೋಲರ್ ಕಟ್ಟಡ ಸೇರಿದಂತೆ ವಿವಿಧೆಡೆ ಕಾಮಗಾರಿ ಪರಿಶೀಲಿಸಿದರು. ಬೇಗ ಕಾಮಗಾರಿ ಮುಗಿಸುವಂತೆ ಗುತ್ತಿಗೆದಾರರು, ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್, ಲೋಕೋಪಯೋಗಿ ಇಲಾಖೆ ಎಇಇ ಕಿರಣ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಆದೇಶ ಹೊರಡಿಸಿದ ಜಿಲ್ಲಾಧಿಕಾರಿ, ಏನದು? ಕಾರಣವೇನು?