ಶಿವಮೊಗ್ಗ ಲೈವ್.ಕಾಂ | 10 ಮಾರ್ಚ್ 2019
ಸರ್ಕಾರಿ ಶಾಲೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಬಳಿಕ ಗೋಡೆ ಮೇಲೆ ಐ ಲವ್ ಯು ಎಂದು ಬರೆದಿದ್ದಾರೆ.
ಶನಿವಾರ ಬೆಳಗ್ಗೆ ಘಟನೆ ನಡೆದಿದೆ. ದೊಣಬಘಟ್ಟ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಿಟಕಿ ಮೂಲಕ, ಬೆಂಕಿಕಡ್ಡಿ ಗೀರಿ ಹಾಕಲಾಗಿದೆ. ಇದರಿಂದ ಕೊಠಡಿಯಲ್ಲಿದ್ದ ಎರಡು ಕುರ್ಚಿಗಳು ಸುಟ್ಟು ಹೋಗಿವೆ.
ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]