
ಶಿವಮೊಗ್ಗ ಲೈವ್.ಕಾಂ | SHIMOGA | 22 ಫೆಬ್ರವರಿ 2020
ಯುವ ಕಾಂಗ್ರೆಸ್ ವತಿಯಿಂದ ನಿರುದ್ಯೋಗ ಕುರಿತು ರಾಷ್ಟ್ರಮಟ್ಟದ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಯುವ ಕಾಂಗ್ರೆಸ್ ನಗರಾಧ್ಯಕ್ಷ ಗಿರೀಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರ್ಚ್ 23ರಂದು ಕ್ರಾಂತಿಕಾರಿ ಭಗತ್ ಸಿಂಗ್ ಅವರು ಹುತಾತ್ಮರಾದ ದಿನ, ದೆಹಲಿಯಲ್ಲಿರುವ ಯುವ ಕಾಂಗ್ರೆಸ್ ಕಚೇರಿಯಲ್ಲಿ ಭಾಷಣ ಸ್ಪರ್ಧೆ ಆಯೋಜಿಸಲಾಗಿದೆ ಎಂದರು. ಫೆಬ್ರವರಿ 29ರವರೆಗೆ ರಿಜಿಸ್ಟರ್ ಮಾಡಿಕೊಳ್ಳಲು ಅವರು ಅವಕಾಶವಿದೆ. ಫೇಸ್’ಬುಕ್, ಟ್ವಿಟರ್ ಮೂಲಕ ರಿಜಿಸ್ಟರ್ ಮಾಡಿಕೊಳ್ಳಬಹುದಾಗಿದೆ.
ಮಿಸ್ಡ್ ಕಾಲ್ ಕೊಡಿ ಅಭಿಯಾನ
ನಿರುದ್ಯೋಗ ಸಮಸ್ಯೆ ಹೆಚ್ಚಳಕ್ಕೆ ಕಾರಣರಾಗಿರುವ ಕೇಂದ್ರ ಸರ್ಕಾರದ ವಿರುದ್ಧ ಧ್ವನಿ ಏರಿಸಿಲು ಮಿಸ್ಡ್ ಕಾಲ್ ಅಭಿಯಾನ ಆರಂಭಿಸಲಾಗಿದೆ ಎಂದರು. 8151994411 ನಂಬರ್’ಗೆ ಮಿಸ್ಡ್ ಕಾಲ್ ಕೊಟ್ಟು, ನಿರುದ್ಯೋಗ ಸಮಸ್ಯೆ ವಿರುದ್ಧ ಧ್ವನಿಗೂಡಿಸಬೇಕು ಎಂದರು.
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್, ಪ್ರಮುಖರಾದ ಕಿರಣ್ ಸೇರಿದಂತೆ ಹಲವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]