ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA, 4 SEPTEMBER 2024 : ಸ್ಮಾರ್ಟ್ ಸಿಟಿ (Smart City) ಕಚೇರಿಯಲ್ಲಿ ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದಲ್ಲಿ ಪ್ರಗತಿ ಪ್ರರಿಶೀಲನಾ ಸಭೆ ನಡೆಯಿತು. ಈ ಸಂದರ್ಭ ವಿವಿಧ ಕಾಮಗಾರಿಗಳ ಕುರಿತು ಮಾಹಿತಿ ಪಡೆದ ಶಾಸಕ ಚನ್ನಬಸಪ್ಪ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅನುದಾನದ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ನಾಲ್ಕು ಪಾಯಿಂಟ್ ಚರ್ಚೆ
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಪಾಯಿಂಟ್ 1 : ಪೂರ್ಣಗೊಂಡಿರುವ ಕಾಮಗಾರಿಗಳು, ನಿರ್ಮಾಣ ಹಂತದಲ್ಲಿರುವ ಕಾಮಗಾರಿಗಳ ಕುರಿತು ಚರ್ಚಿಸಿದರು. ಯೋಜನೆಯ ಅನುಷ್ಠಾನದಲ್ಲಿ ಅಸಡ್ಡೆ ತೋರಿದ ಅಧಿಕಾರಿಗಳ ವಿರುದ್ಧ ವರದಿ ಸಲ್ಲಿಸಲು ಸೂಚಿಸಿದರು.
» ಪಾಯಿಂಟ್ 2 : ಖೇಲೋ ಇಂಡಿಯಾ ಯೋಜನೆ ಕೈತಪ್ಪಿದ ಬಗ್ಗೆ ಚರ್ಚೆ. ಶಿವಮೊಗ್ಗ ನಗರದಲ್ಲಿರುವ ಕನ್ಸರ್ವೆನ್ಸಿ ರಸ್ತೆಗಳ ಅಭಿವೃದ್ಧಿ ಕುರಿತು ಮಾಹಿತಿ ಪಡೆದರು. ಸಮರ್ಪಕವಾಗಿ ಅಭಿವೃದ್ಧಿಗೆ ಸೂಚನೆ.
» ಪಾಯಿಂಟ್ 3 : ಗಾಂಧಿಪಾರ್ಕ್ ನಿಧಾನಗತಿಯ ಕಾಮಗಾರಿಗಳ ಕುರಿತು ಮಾಹಿತಿ ಪಡೆದುರ. ಶೀಘ್ರ ಕಾಮಗಾರಿಗಳನ್ನು ಮುಕ್ತಾಯಗೊಳಿಸಲು ಸೂಚಿನೆ.
» ಪಾಯಿಂಟ್ 4 : ಯುಜಿ ವಿದ್ಯುತ್ ಸೊರಬರಾಜಿನಲ್ಲಿ ಆಗುತ್ತಿರುವ ಅವಘಡಗಳ ಕುರಿತಂತೆ ಮುಂಜಾಗ್ರತ ಕ್ರಮ ವಹಿಸುವಂತೆ ಆದೇಶಿಸಿದರು.
ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ಇದನ್ನೂ ಓದಿ » ಭದ್ರಾವತಿಯಲ್ಲಿ ಎಂಟು ಅಡಿ ಆಳದ ತೊಟ್ಟಿಗೆ ಬಿದ್ದ ಹಸು