ಶಿವಮೊಗ್ಗ ಲೈವ್.ಕಾಂ | SHIMOGA | 5 ಫೆಬ್ರವರಿ 2020

ಮಾಜಿ ಶಾಸಕರಾದ ಮಧು ಬಂಗಾರಪ್ಪ ಮತ್ತು ಶಾರದಾ ಪೂರ್ಯಾನಾಯ್ಕ್ ಅವರು ಕಾಂಗ್ರೆಸ್ ಸೇರ್ಪಡೆ ಕುರಿತು ತಮಗೆ ಮಾಹಿತಿ ಇಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುಂದರೇಶ್, ಮಧು ಬಂಗಾರಪ್ಪ ಮತ್ತು ಶಾರದಾ ಪೂರ್ಯಾನಾಯ್ಕ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವುದಾದರೆ ಸ್ವಾಗತ ಎಂದರು.
ಮಧು ಬಂಗಾರಪ್ಪ ಮತ್ತು ಶಾರದಾ ಪೂರ್ಯಾನಾಯ್ಕ್ ಅವರು ನಮ್ಮ ಪಕ್ಷಕ್ಕೆ ಸೇರಲಿದ್ದಾರೆ ಅನ್ನುವ ವರದಿಗಳನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಇದರ ಹೊರತು ಜಿಲ್ಲಾ ಕಾಂಗ್ರೆಸ್ ಪಕ್ಷದ ಹಂತದಲ್ಲಿ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]