ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 FEBRUARY 2024
SHIKARIPURA : ಕ್ಷುಲಕ ವಿಚಾರಕ್ಕೆ ಯುವಕನಿಗೆ ಚಾಕು ಇರಿತ ಪ್ರಕರಣ ಖಂಡಿಸಿ ಶಿಕಾರಿಪುರ ಪೊಲೀಸ್ ಠಾಣೆ ಮುಂಭಾಗ ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ತಾಲೂಕು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದರು. ಶಿಕಾರಿಪುರದಲ್ಲಿ ಮಂಗಳವಾರ ಸುಶೀಲ್ ಎಂಬಾತನ ಮೇಲೆ ಇಬ್ಬರು ಅಪ್ರಾಪ್ತರು ಸೇರಿ ನಾಲ್ವರು ದಾಳಿ ನಡೆಸಿ ಚಾಕುವಿನಿಂದ ಇರಿದಿದ್ದರು.
ಜಾಹೀರಾತು ಶಿವಮೊಗ್ಗದಲ್ಲಿ ಮನೆ ಸಾಲ ಮತ್ತು ಇತರೆ ಲೋನ್ಗಳನ್ನು ಪಡೆಯುವುದು ಈಗ ಸುಲಭ. ಕರೆ ಮಾಡಿ 9972194422
ಸಂಸದ ರಾಘವೇಂದ್ರ ಗರಂ
ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಕಾಂಗ್ರೆಸ್ ಪಕ್ಷದ ಮುಸ್ಲಿಂ ತುಷ್ಟೀಕರಣ ರಾಜಕಾರಣಕ್ಕೆ ಇನ್ನೆಷ್ಟು ಹಿಂದೂ ಕಾರ್ಯಕರ್ತರು ಬಲಿಯಾಗಬೇಕು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ನಂತರ ಮುಸ್ಲಿಂ ಸಮುದಾಯದ ಕೆಲವರು ತಾವು ಏನೇ ಮಾಡಿದರೂ ನಡೆಯುತ್ತದೆ, ಯಾರೂ ಕೇಳುವಂತಿಲ್ಲ ಎಂಬಂತೆ ವರ್ತಿಸುತ್ತಿದ್ದಾರೆ. ಇದನ್ನೆಲ್ಲ ನೋಡಿಕೊಂಡ ಸುಮ್ಮನೆ ಕೂರುತ್ತೇವೆ ಎಂಬ ತಪ್ಪು ತಿಳಿವಳಿಕೆ ಬೇಡ ಎಂದು ಎಚ್ಚರಿಸಿದರು.
ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಪ್ರಮುಖರಾದ ವಸಂತಗೌಡ, ಡಿ.ಎಲ್.ಬಸವರಾಜ, ಅಂಬಾರಗೊಪ್ಪ ಶೇಖರ್, ಎಸ್.ಎಸ್.ರಾಘವೇಂದ್ರ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗಹಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವಿಜಯೇಂದ್ರ ಮನೆಗೆ ಮುತ್ತಿಗೆ ಯತ್ನ, ಹಲವರು ಪೊಲೀಸ್ ವಶಕ್ಕೆ
ಶಿವಮೊಗ್ಗ ಲೈವ್.ಕಾಂ