ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ | 25 ಸೆಪ್ಟೆಂಬರ್ 2019

ಶಿವಮೊಗ್ಗ ದಸರಾದ ಆಹಾರ ಮೇಳದಲ್ಲಿ ಇವತ್ತು ಮುದ್ದೆ ತಿನ್ನುವ ಸ್ಪರ್ಧೆ ಆಯೋಜಿಸಲಾಗಿತ್ತು. ಮಹಾನಗರ ಪಾಲಿಕೆ ವತಿಯಿಂದ ಶಿವಪ್ಪನಾಯಕ ಪ್ರತಿಮೆ ಬಳಿ ಕಾರ್ಯಕ್ರಮ ನಡೆಸಲಾಯಿತು.
ಮುದ್ದೆ ತಿನ್ನುವ ಸ್ಪರ್ಧೆಯಲ್ಲಿ ಮಹಿಳೆಯರು ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು. 50ಕ್ಕೂ ಹೆಚ್ಚು ಮಹಿಳೆಯರು ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಸ್ಪರ್ಧಾಳುಗಳ ಜೊತೆ ಉಪಮೇಯರ್
ಮುದ್ದೆ ತಿನ್ನುವ ಸ್ಪರ್ಧೆಯ ಪುರುಷರ ವಿಭಾಗದಲ್ಲಿ ಉಪಮೇಯರ್ ಎಸ್.ಎನ್.ಚನ್ನಬಸಪ್ಪ ಪಾಲ್ಗೊಂಡಿದ್ದರು. ಮುದ್ದೆ ತಿಂದು ಸ್ಪರ್ಧಿಗಳನ್ನು ಹುರಿದುಂಬಿಸಿದರು.

ಮೇಯರ್ ಲತಾ ಗಣೇಶ್, ದಸರಾ ಉತ್ಸವದ ಆಹಾರ ಸಮಿತಿ ಅಧ್ಯಕ್ಷೆ ಅನಿತಾ ರವಿಶಂಕರ್, ಪಾಲಿಕೆ ಸದಸ್ಯರಾದ ಯೋಗೇಶ್, ರೇಖಾ ರಂಗನಾಥ್, ಯಮುನಾ ರಂಗೇಗೌಡ ಸೇರಿದಂತೆ ಹಲವರು ಈ ಸಂದರ್ಭ ಇದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]