ಶಿವಮೊಗ್ಗ ಲೈವ್.ಕಾಂ | ಭದ್ರಾವತಿ | 4 ಆಗಸ್ಟ್ 2019
ಭದ್ರಾವತಿಯಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿನಿಯ ಬರ್ಬರ ಹತ್ಯೆ ಮಾಡಲಾಗಿದೆ. ಮನೆಯಲ್ಲೇ ವಿದ್ಯಾರ್ಥಿನಿಯ ಕತ್ತು ಸೀಳಿ ಕೊಲೆ ಮಾಡಲಾಗಿದೆ.
ಭದ್ರಾವತಿಯ ಕಾಳಿಂಗನಹಳ್ಳಿಯಲ್ಲಿ ಘಟನೆ ನಡೆದಿದೆ. ಇಂದಿರಾ (16) ಕೊಲೆಯಾಗಿರುವ ವಿದ್ಯಾರ್ಥಿನಿ. ರಾತ್ರಿಯೇ ಇಂದಿರಾಳ ಹತ್ಯೆಯಾಗಿರುವ ಶಂಕೆಯಿದ್ದು, ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.
ವಿಚಾರ ತಿಳಿಯುತ್ತಿದ್ದಂತೆ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಹೆಚ್ಚುವರಿ ರಕ್ಷಣಾಧಿಕಾರಿ ಶೇಖರ್, ಭದ್ರಾವತಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | [email protected]