ಶಿವಮೊಗ್ಗ ಲೈವ್.ಕಾಂ | SHIMOGA | 10 ಫೆಬ್ರವರಿ 2020

ಶಿವಮೊಗ್ಗದಲ್ಲಿ ಮತ್ತೊಂದ ಬರ್ಬರ ಹತ್ಯ ನಡೆದಿದೆ. ಕಣ್ಣಿಗೆ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ, ರಾತ್ರಿ ವ್ಯಕ್ತಿಯೊಬ್ಬರನ್ನು ಭೀಕರವಾಗಿ ಕೊಲೆ ಮಾಡಲಾಗಿದೆ.
ನಾಗರಾಜ್ ಅಲಿಯಾಸ್ ಟೈಲ್ಸ್ ನಾಗ (45) ಹತ್ಯೆಗೀಡಾದವರು. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಹತ್ಯೆ ಮಾಡಿರುವ ಕುರಿತು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದ ಕುವೆಂಪು ಬಡಾವಣೆಯಲ್ಲಿ ರಾತ್ರಿ ಟೈಲ್ಸ್ ನಾಗರಾಜ್ ಕಣ್ಣಿಗೆ ಖಾರದ ಪುಡಿ ಎರಚಿದ ದುಷ್ಕರ್ಮಿಗಳು, ಹಲ್ಲೆ ನಡೆಸಿ, ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ಕುರಿತು ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]