ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 DECEMBER 2022
ಭದ್ರಾವತಿ : ಭಿಕ್ಷೆ ಬೇಡಿ ಜೀವನ ನಡೆಸುತ್ತಿದ್ದ ವೃದ್ಧೆಯೊಬ್ಬಳ (murder in temple) ಉಸಿರಗಟ್ಟಿಸಿ ಕೊಲೆ ಮಾಡಿ, ಆಕೆಯ ಮೂಗುತಿ, ಓಲೆ ಕದ್ದೊಯ್ದಿದ್ದ ಆರೋಪಿಯನ್ನು ಭದ್ರಾವತಿ ಪೊಲೀಸರು ಬಂಧಿಸಿದ್ದಾರೆ. ಸಣ್ಣ ಸಾಕ್ಷಿಯು ಇಲ್ಲದ ಪ್ರಕರಣವನ್ನು ಭೇದಿಸಿ, ಆರೋಪಿಯನ್ನು ಜೈಲಿಗಟ್ಟಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಭದ್ರಾವತಿ ತಾಲೂಕು ಸುಣ್ಣದ ಹಳ್ಳಿಯ ವೃದ್ಧೆ ಶಂಕ್ರಮ್ಮ (70) ಮೃತರು. ಗ್ರಾಮದ ಶ್ರೀ ಅಂತರ ಘಟ್ಟಮ್ಮ ದೇವಸ್ಥಾನದ ಕಾಂಪೌಂಡ್ ಒಳಗೆ ಶಂಕ್ರಮ್ಮ ಅವರನ್ನು ಉಸಿರುಗಟ್ಟಿಸಿ ಕೊಲೆ (murder in temple) ಮಾಡಲಾಗಿತ್ತು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಮೂಗುತಿ, ಓಲೆಗಾಗಿ ಕೊಲೆ
ಸುಣ್ಣದ ಹಳ್ಳಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಮುಂದೆ ಶಂಕ್ರಮ್ಮ ಭಿಕ್ಷೆ ಬೇಡುತ್ತಿದ್ದರು. ಅದರಿಂದ ಬಂದ ಹಣದಲ್ಲಿ ಜೀವನ ನಡೆಸುತ್ತಿದ್ದರು. ಅಂತರ ಘಟ್ಟಮ್ಮ ದೇವಸ್ಥಾನದ ಕಾಂಪೌಂಡ್ ಒಳಗೆ ನಿತ್ಯ ಮಲಗುತ್ತಿದ್ದರು. ಡಿ.3ರಂದು ಶಂಕ್ರಮ್ಮ ಮೃತಪಟ್ಟಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಪರಿಶೀಲನೆ ನಡೆಸಿದಾಗ ಕೊಲೆಯಾಗಿರುವುದು ಗೊತ್ತಾಗಿತ್ತು.
ತನಿಖೆ ನಡೆಸಿದ ಪೊಲೀಸರು ಉಡುಪಿ ಜಿಲ್ಲೆ ಕುಂದಾಪುರ ಸಮೀಪದ ದುಗ್ಗದ ಮನೆ ನಿವಾಸಿ ಕರುಣಾಕರ ದೇವಾಡಿಗ (24) ಎಂಬಾತನನ್ನು ಬಂಧಿಸಿದ್ದಾರೆ. ಶಂಕ್ರಮ್ಮನ ಕಿವಿಯಲ್ಲಿದ್ದ ಓಲೆ, ಮೂಗುತಿಗಾಗಿ ಆಕೆಯ ಕೊಲೆ ಮಾಡಿದ್ದ. ಹತ್ಯೆ ಬಳಿಕ 14 ಸಾವಿರ ಮೌಲ್ಯದ ಓಲೆ, ಮೂಗುತಿಯನ್ನು ಕದ್ದೊಯ್ದಿದ್ದ. ಸಣ್ಣ ಸುಳಿವು ಇಲ್ಲದ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಓಲೆ, ಮೂಗುತಿ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ – ಮೈಸೂರಿನಿಂದ ಸಿಗಂದೂರಿಗೆ ತೆರಳುತ್ತಿದ್ದ ಇನ್ನೋವಾ ಕಾರು, ಲಾರಿ ಮಧ್ಯೆ ಭೀಕರ ಅಪಘಾತ
ಭದ್ರಾವತಿ ಎಎಎಸ್ಪಿ ಜಿತೇಂದ್ರಕುಮಾರ್ ದಯಾಮ ಅವರ ಮೇಲ್ವಿಚಾರಣೆಯಲ್ಲಿ ಪೇಪರ್ ಟೌನ್ ಠಾಣೆ ಇನ್ಸ್ ಪೆಕ್ಟರ್ ಇ.ಒ. ಮಂಜುನಾಥ್ ಅವರ ನೇತೃತ್ವದಲ್ಲಿ ಪಿಎಸ್ಐ ಶಿಲ್ಪಾ ನಾಯನೇಗಲಿ ಅವರ ತಂಡ ತನಿಖೆ ನಡೆಸಿತ್ತು. ಸಿಬ್ಬಂದಿ ರತ್ನಾಕರ, ವಾಸುದೇವ, ಚಿನ್ನ ನಾಯ್ಕ, ಹನಮಂತ ಅವಟಿ, ಆದರ್ಶ ಶೆಟ್ಟಿ, ಮೌನೇಶ ಶೀಖಲ್, ಅರುಣ್ ಆರ್, ವಿಕ್ರಮ್ ಅವರ ತಂಡ ಆರೋಪಿಯನ್ನು ಬಂಧಿಸಿದೆ.