ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA | 4 ನವೆಂಬರ್ 2019
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಸ್ಥಳೀಯ ಸುದ್ದಿಗಳಿಗೆ ಆದ್ಯತೆ ನೀಡುವ ಸಲುವಾಗಿ ಶಿವಮೊಗ್ಗದಲ್ಲಿ ಮತ್ತೊಂದು ಸುದ್ದಿ ವಾಹಿನಿ ಆರಂಭವಾಗುತ್ತಿದೆ. ನವೆಂಬರ್ 6ರಂದು ‘ನಮ್ಮ ಟಿವಿ ಶಿವಮೊಗ್ಗ’ ಚಾನೆಲ್ ಲೋಕಾರ್ಪಣೆಗೊಳ್ಳುತ್ತಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಮ್ಮ ಟಿವಿ ಶಿವಮೊಗ್ಗದ ಸಂಪಾದಕ ನಾಗರಾಜ ನೇರಿಗೆ, ಸುದ್ದಿ ಜೊತೆಗೆ ಕೃಷಿ, ವ್ಯಾಪಾರ, ವಾಣಿಜ್ಯ ಸೇರಿದಂತೆ ಹಲವು ಸ್ಥಳೀಯ ವಿಚಾರಗಳಿಗೆ ಆದ್ಯತೆ ನೀಡಲಿದೆ ಎಂದರು.
ನವೆಂಬರ್ 6ರಂದು ನಮ್ಮ ಟಿವಿ ಶಿವಮೊಗ್ಗ ಲೋಕಾರ್ಪಣೆಗೊಳ್ಳಲಿದೆ. ಶ್ರೀ ಮನ್ಮಹಾರಾಜ ನಿರಂಜನ ಸ್ವಾಮೀಜಿ, ಬೆಕ್ಕಿನಕಲ್ಮಠದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ, ಆದಿಚುಂಚನಗಿರಿಯ ಶ್ರೀ ಪ್ರಸನ್ನನಾಥ ಸ್ವಾಮೀಜಿ, ಬಸವ ಕೇಂದ್ರದ ಬಸವ ಮರುಳಸಿದ್ಧ ಸ್ವಾಮೀಜಿ ವಾಹಿನಿ ಲಾಂಛನ ಬಿಡುಗಡೆ ಮಾಡಲಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ನಮ್ಮ ಟಿವಿ ಶಿವಮೊಗ್ಗವನ್ನು ಲಾಂಚ್ ಮಾಡಲಿದ್ದಾರೆ ಎಂದು ನಾಗರಾಜ್ ನೇರಿಗೆ ತಿಳಿಸಿದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]