ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 21 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಅಕ್ಟೋಬರ್ ತಿಂಗಳಿನಲ್ಲಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಕೃಷಿ ಮತ್ತು ತೋಟಗಾರಿಕೆ ಮೇಳ ನಡೆಯಲಿದೆ. ಇದರಲ್ಲಿ ಪ್ರಗತಿಪರ ರೈತ, ರೈತ ಮಹಿಳೆ ಪ್ರಶಸ್ತಿ ನೀಡಲು ಅರ್ಜಿ (Application) ಆಹ್ವಾನಿಸಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ಸಮಗ್ರ ಕೃಷಿ ಅಳವಡಿಸಿಕೊಂಡು ಪ್ರಗತಿಯತ್ತ ಸಾಗುತ್ತಿರುವ ರೈತ ಹಾಗೂ ರೈತ ಮಹಿಳೆಯರನ್ನು ವಿಶ್ವವಿದ್ಯಾಲಯದ ವ್ಯಾಪ್ತಿಗೆ ಬರುವ ಪ್ರತಿ ಜಿಲ್ಲೆಗೆ ಒಬ್ಬರಂತೆ ಗುರುತಿಸಲಾಗುವುದು. ಅರ್ಜಿಗಳನ್ನು (Application) ಶಿವಮೊಗ್ಗ ಕೃಷಿ ವಿಜ್ಞಾನ ಕೇಂದ್ರ ಹಾಗೂ ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು. ಸೆ.30ರೊಳಗೆ ಕೃಷಿ ವಿಜ್ಞಾನ ಕೇಂದ್ರ ಅಥವಾ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ನೀಡಬೇಕು.
ಇದನ್ನೂ ಓದಿ – ಬರಪೀಡತ ತಾಲೂಕುಗಳ ಪಟ್ಟಿ ಪ್ರಕಟ, ಶಿವಮೊಗ್ಗ ಜಿಲ್ಲೆಯ ಪರಿಸ್ಥಿತಿ ಏನು?
ಹೆಚ್ಚಿನ ಮಾಹಿತಿಗೆ ನವುಲೆ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರ ದೂರವಾಣಿ ಸಂಖ್ಯೆ : 9480838976, [email protected], [email protected] ಹಾಗೂ ಶಿವಮೊಗ್ಗ ಜಂಟಿ ಕೃಷಿ ನಿರ್ದೇಶಕರ ಮೊ.ನಂ : 8277932600, [email protected] ನ್ನು ಸಂಪರ್ಕಿಸಬಹುದಾಗಿದೆ. ಅರ್ಜಿ ಫಾರಂನ್ನು http://www.uahs.edu.in ಮೂಲಕ ಪಡೆಯಬಹುದಾಗಿದೆ ಎಂದು ಶಿವಮೊಗ್ಗ ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿಗಳು ಮತ್ತು ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.