SHIVAMOGGA LIVE| 25 JUNE 2023
ಕರ್ತವ್ಯ ಪ್ರಜ್ಞೆ ಮೆರೆದ ಬಸ್ ಸಿಬ್ಬಂದಿ, ಪ್ರಯಾಣಿಕ ಸೇಫ್

THIRTHAHALLI : ಶಿವಮೊಗ್ಗ – ಮಂಗಳೂರು (Mangalore) ರೂಟ್‌ನ ಖಾಸಗಿ
ಬಸ್ಸಿನಲ್ಲಿ (Private Bus) ತೆರಳುತ್ತಿದ್ದ ಪ್ರಯಾಣಿಕರೊಬ್ಬರಿಗೆ ಹೃದಯಾಘಾತ ಸಂಭವಿಸಿದೆ. ದುರ್ಗಾಂಬ (Durgamba) ಬಸ್ಸಿನಲ್ಲಿ ತೆರಳುತ್ತಿದ್ದಾಗ ತೀರ್ಥಹಳ್ಳಿ ಸಮೀಪ ಘಟನೆ ಸಂಭವಿಸಿದೆ. ದುರ್ಗಾಂಬ ಬಸ್ ಕಂಡಕ್ಟರ್, ಡ್ರೈವರ್ ಪ್ರಯಾಣಿಕನನ್ನು ಕೂಡಲೆ ತೀರ್ಥಹಳ್ಳಿ ಜೆ.ಸಿ.ಆಸ್ಪತ್ರೆಗೆ ದಾಖಲಿಸಿ ಕರ್ತವ್ಯ ಪ್ರಜ್ಞೆ ಮರೆದಿದ್ದಾರೆ. ಇನ್ನು, ತೀರ್ಥಹಳ್ಳಿ ಪ್ರಾಥಮಿಕ ಚಿಕಿತ್ಸೆ ಪಡೆದ ಪ್ರಯಾಣಿಕನನ್ನು ಶಿವಮೊಗ್ಗದ ಆಸ್ಪತ್ರೆ ಕರೆದೊಯ್ದು ದಾಖಲಿಸಲಾಗಿದೆ. ಆಂಬುಲೆನ್ಸ್ ಚಾಲಕ ರಂಜಿತ್, ರಹಮತ್ ಮತ್ತು ಪವನ್ ಅವರು ಸಕಾಲಕ್ಕೆ ಪ್ರಯಾಣಿಕನನ್ನು ಶಿವಮೊಗ್ಗದಲ್ಲಿ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ. ಸದ್ಯ ಪ್ರಯಾಣಿಕ ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಹೃದಯಾಘಾತಕ್ಕೀಡಾದ ಪ್ರಯಾಣಿಕನನನ್ನು ಕೇರಳ ಮೂಲದ ಬಾಬು ಎಂದು ಹೇಳಲಾಗುತ್ತಿದೆ.
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಇದನ್ನೂ ಓದಿ – ಈ ಮೇಲ್‌ನಲ್ಲಿ ಬಂತು ದೂರು, ಸಾಮಿಲ್ ಮೇಲೆ ಪೊಲೀಸರ ದಾಳಿ, ಮುಂದೇನಾಯ್ತು?
ಮನೆಗೆ ನುಗ್ಗಿದ್ದ ಕಳ್ಳ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದ

BHADRAVATHI : ಕಳ್ಳತನ ಮಾಡಲು ಮನೆಯೊಂದಕ್ಕೆ ನುಗ್ಗಿದ್ದ ಕಳ್ಳ (Thief)
ಗ್ರಾಮಸ್ಥರಿಗೆ ಸಿಕ್ಕಿಬಿದ್ದಿದ್ದಾನೆ. ಭದ್ರಾವತಿ ತಾಲೂಕು ಕಡದಕಟ್ಟೆಯಲ್ಲಿ ಘಟನೆ ಸಂಭವಿಸಿದೆ. ಮನೆಯೊಂದರಲ್ಲಿ ಕಳ್ಳತನ ಮಾಡುವಾಗ ಕಳ್ಳ ಸಿಕ್ಕಿಬಿದ್ದಿದ್ದಾನೆ. ಗ್ರಾಮಸ್ಥರು ಆತನನ್ನು ಹಿಡಿದು ಪೊಲೀಸರಿಗೆ (Police) ಒಪ್ಪಿಸಿದ್ದಾರೆ. ನ್ಯೂ ಟೌನ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದ ಮೊದಲ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ ಕಟ್ಟಡ ರೆಡಿ, ಹೇಗಿದೆ? ಎಷ್ಟು ಕಾರ್, ಬೈಕ್ ನಿಲ್ಲಿಸಬಹುದು?
ಕಾರೇಹಳ್ಳಿ ಬಳಿ ಕಾರಿಗೆ ಗುದ್ದಿದ ಲಾರಿ

BHADRAVATHI : ಲಾರಿ ಮತ್ತು ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದವರಿಗೆ
ಸಣ್ಣಪುಟ್ಟ ಗಾಯವಾಗಿದೆ. ಭದ್ರಾವತಿ ತಾಲೂಕು ಕಾರೇಹಳ್ಳಿ (Karehalli) ಬಳಿ ಘಟನೆ ಸಂಭವಿಸಿದೆ. ಹಿಂಬದಿ ಬರುತ್ತಿದ್ದ ಲಾರಿ ಆಲ್ಟೋ ಕಾರಿಗೆ ಡಿಕ್ಕಿ ಹೊಡೆದಿದೆ. ಕಾರಿನ ಹಿಂಭಾಗಕ್ಕೆ ಹಾನಿಯಾಗಿದೆ. ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯವಾಗಿದೆ. ಪೇಪರ್ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಚಂದ್ರಗುತ್ತಿ ದೇವಸ್ಥಾನದಲ್ಲಿ ಹುಂಡಿ ಹಣ ಎಣಿಕೆ, ಎಷ್ಟು ಕಾಣಿಕೆ ಸಂಗ್ರಹವಾಗಿದೆ?
ಚಿನ್ನಾಭರಣ ಕಳ್ಳತನ ಸೂಳೆಬೈಲ್‌ನ ಯುವಕ ಅರೆಸ್ಟ್
SHIMOGA : ಅಶೋಕನಗರದ ಮನೆಯೊಂದರ ಬಾಗಿಲಿನ ಲಾಕ್
ಮುರಿದು ಬೀರುವಿನಲ್ಲಿದ್ದ ನಗದು, ಚಿನ್ನಾಭರಣ ದೋಚಲಾಗಿತ್ತು. ತನಿಖೆ ನಡೆಸಿದ ಪೊಲೀಸರು ಸೂಳೆಬೈಲು ನಿವಾಸಿ ತೌಸೀಫ್ ಅಲಿಯಾಸ್ ಟೈಗರ್ (24) ಎಂಬಾತನನ್ನು ಬಂಧಿಸಿದ್ದಾರೆ. ಆತನಿಂದ 1.48 ಲಕ್ಷ ರೂ. ಮೌಲ್ಯದ 33.50 ಗ್ರಾಂ ಬಂಗಾರದ ಆಭರಣ, ಒಂದು ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ದೊಡ್ಡಪೇಟೆ ಠಾಣೆ ಸಿಬ್ಬಂದಿ ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಇದನ್ನೂ ಓದಿ – ಮಧ್ಯರಾತ್ರಿ ಶಿವಮೊಗ್ಗ KSRTC ಬಸ್ ನಿಲ್ದಾಣದಲ್ಲಿ ಪ್ರಯಾಣಿಕನಿಗೆ ಶಾಕ್, ಕಂತೆ ಕಂತೆ ಹಣದ ಬ್ಯಾಗ್ ಮಿಸ್ಸಿಂಗ್
ಜಂಬಿಟ್ಟಿಗೆ ಗಣಿ ಮೇಲೆ ದಾಳಿ
RIPPONPETE : ಅಕ್ರಮವಾಗಿ ಜಂಬಿಟ್ಟಿಗೆ ಗಣಿಗಾರಿಕೆ ನಡೆಸುತ್ತಿರುವ
ಆರೋಪದ ಹಿನ್ನೆಲೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರು. ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಸರೂರು ಗ್ರಾಮದಲ್ಲಿ ದಾಳಿ ನಡೆಸಲಾಗಿದೆ. ದಾಳಿ ವೇಳೆ ಲಾರಿ, ಟ್ರ್ಯಾಕ್ಟರ್ ಮತ್ತು ಜಂಬಿಟ್ಟಿಗೆ ಕತ್ತರಿಸುವ ಯಂತ್ರ ಸಿಕ್ಕಿದ್ದು, ವಶಕ್ಕೆ ಪಡೆಯಲಾಗಿದೆ. ಹಿರಿಯ ವಿಜ್ಞಾನಿ ವಿಂಧ್ಯಾ, ಸಹಾಯಕ ಅಧಿಕಾರಿ ಕೆ.ಎಲ್.ಮಾನಸ ದಾಳಿ ವೇಳೆ ಇದ್ದರು. ಪ್ರಕರಣವನ್ನು ರಿಪ್ಪನ್‌ಪೇಟೆ ಠಾಣೆಗೆ ಹಸ್ತಾಂತರಿಸಲಾಗಿದೆ.
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





