ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 15 JULY 2023
ಸಾಗರ, ಹೊಸನಗರಕ್ಕೆ ಸಚಿವ ಮಧು ಭೇಟಿ
SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಇವತ್ತು ಜಿಲ್ಲೆಗೆ ಭೇಟಿ ನೀಡುತ್ತಿದ್ದಾರೆ. ಬೆಳಿಗ್ಗೆ 10.30ಕ್ಕೆ ಸಾಗರಕ್ಕೆ ಆಗಮಿಸಿ ಪಕ್ಷದ ಕಚೇರಿಗೆ ಭೇಟಿ ನೀಡುವರು. ಬೆ. 11.30ಕ್ಕೆ ಸಾಗರ ಸಹಾಯಕ ಆಯುಕ್ತರ ಕಚೇರಿಯಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸುವರು ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಮಧ್ಯಾಹ್ನ 3ಕ್ಕೆ ಹೊಸನಗರ ಆಗಮಿಸಿ 4ಕ್ಕೆ ಹೊಸನಗರ ಪಕ್ಷದ ಕಚೇರಿಗೆ ಭೇಟಿ ನೀಡುವರು. ಸಂಜೆ 4.30ಕ್ಕೆ ಹೊಸನಗರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪ್ರಗತಿ ಪರಿಶೀಲನಾ ಸಭೆ ನಡೆಸುವರು ಹಾಗೂ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು ಎಂದು ಸಚಿವರ ವಿಶೇಷ ಕರ್ತವ್ಯಾಧಿಕಾರಿಗಳು ಪ್ರಕಟಣೆ ತಿಳಿಸಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಇದನ್ನೂ ಓದಿ – ಹೊಳೆಹೊನ್ನೂರು ಚಾತುರ್ಮಾಸ್ಯದಲ್ಲಿ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ, ವಿದ್ವತ್ ಸಭೆಯಲ್ಲಿ ಶ್ರೀಗಳ ಸಂದೇಶ
ಬೈಕಿನಲ್ಲಿ ಬಂದು ಮಾಂಗಲ್ಯ ಸರ ಕಳ್ಳತನ
SHIMOGA : ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ಮಹಿಳೆಯೊಬ್ಬರ ಮಾಂಗಲ್ಯ ಸರ ಕಳ್ಳತನ (Chain Theft) ಮಾಡಲಾಗಿದೆ. ಚಿಕ್ಕಲ್ ಪಾರ್ಕ್ ಬಳಿ ಘಟನೆ ಸಂಭವಿಸಿದೆ. ಲತಾ ಎಂಬುವವರ ಮಾಂಗಲ್ಯ ಸರದ ಅರ್ಧ ಭಾಗ ಕಳ್ಳತನವಾಗಿದೆ. ಬೈಕಿನಲ್ಲಿ ಬಂದಿದ್ದ ಇಬ್ಬರು ಕಳ್ಳರು ಮಹಿಳೆಯ ಮಾಂಗಲ್ಯಕ್ಕೆ ಕೈ ಹಾಕಿದ್ದಾರೆ. ಆಗ ಮಹಿಳೆ ಮಾಂಗಲ್ಯವನ್ನು ಬಿಗಿಯಾಗಿ ಹಿಡಿದ್ದಾರೆ. ಹಾಗಾಗಿ 20 ಗ್ರಾಂ ಚಿನ್ನದ ಸರ ಮಹಿಳೆಯ ಕೈಯಲ್ಲಿ ಉಳಿದ್ದು, 30 ಗ್ರಾಂ ಸರವನ್ನು ಕಳ್ಳರು (Chain Theft) ಹೊತ್ತೊಯ್ದಿದ್ದಾರೆ. ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ – ಬೆಂಗಳೂರು ವಿಮಾನದ ಟಿಕೆಟ್ ಬಕ್ಕಿಂಗ್‌ಗೆ ದಿನಾಂಕ ಫಿಕ್ಸ್, ಯಾವ ಮಾದರಿ ವಿಮಾನ? ಎಷ್ಟು ಸೀಟ್ ಇರುತ್ತೆ?
ರಕ್ತ ವಾಂತಿ ಮಾಡಿಕೊಂಡ ಮಹಿಳೆಗೆ ನೆರವಾದ ಪೊಲೀಸ್
SHIMOGA : ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ವೇಳೆ ಮಹಿಳೆಯೊಬ್ಬರು ರಕ್ತ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಭದ್ರತೆಗೆ ನಿಯೋಜನೆಗೊಂಡಿದ್ದ ಕೋಟೆ ಠಾಣೆ ಪಿಎಸ್‌ಐ ತಿರುಮಲೇಶ್, ಜಯನಗರ ಠಾಣೆ ಕಾನ್‌ಸ್ಟೇಬಲ್ ರಾಮಕೃಷ್ಣ ಅವರು ತಕ್ಷಣ ಕಾರ್ಯಪ್ರವೃತ್ತರಾಗಿ ಮಹಿಳೆಗೆ ನೆರವು ನೀಡಿದ್ದಾರೆ. ಮಹಿಳೆಯನ್ನು ಎತ್ತಿಕೊಂಡು ಹೋಗಿ ಪೊಲೀಸ್ ಜೀಪ್‌ನಲ್ಲಿ ಕೂರಿಸಿ, ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಗೆ ದಾಖಲಿಸಿದ್ದಾರೆ. ಪಿಎಸ್‌ಐ ತಿರುಮಲೇಶ್ ಮತ್ತು ಕಾನ್‌ಸ್ಟೇಬಲ್ ರಾಮಕೃಷ್ಣ ಅವರ ಕಾರ್ಯಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.