ಶಿವಮೊಗ್ಗದ ಚೇತನ್‌ಗೆ ದಾವಣಗೆರೆ ಉಸ್ತುವಾರಿ | ನ.25ರಂದು ಸಮನ್ವಯ ಟ್ರಸ್ಟ್‌ ವಾಚನಾಲಯ ಉದ್ಘಾಟನೆ – ಫಟಾಫಟ್‌ ನ್ಯೂಸ್‌

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 22 NOVEMBER 2023

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಶಿವಮೊಗ್ಗದ ಚೇತನ್‌ ಗೌಡಗೆ ದಾವಣಗೆರೆ ಉಸ್ತುವಾರಿ

FATAFAT-NEWS-1SHIMOGA : ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಮೊಗ್ಗದ ಚೇತನ್‌ ಗೌಡ ಅವರನ್ನು ದಾವಣಗೆರೆ ಯುವ ಕಾಂಗ್ರೆಸ್‌ ಉಸ್ತುವಾರಿಯಾಗಿ ನೇಮಿಸಲಾಗಿದೆ. ಎರಡನೇ ಬಾರಿ ದಾವಣಗೆರೆ ಜಿಲ್ಲೆಯ ಉಸ್ತುವಾರಿಯಾಗಿ ಚೇತನ್‌ ಗೌಡ ನೇಮಕವಾಗಿದ್ದಾರೆ. ಇನ್ನು, ಶಿವಮೊಗ್ಗ ಜಿಲ್ಲೆಗೆ ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಮೆರಿಲ್‌ ರೀಗೋ ಅವನ್ನು ನೇಮಿಸಲಾಗಿದೆ. ಈ ಸಂಬಂದ ಯುವ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಆದೇಶ ಹೊರಡಿಸಿದ್ದಾರೆ.

CHETAN

PHOTO : ಯುವ ಕಾಂಗ್ರೆಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಚೇತನ್‌ ಗೌಡ

ಸಮನ್ವಯ ಟ್ರಸ್ಟ್‌ನಿಂದ ವಾಚನಾಲಯ

FATAFAT-NEWS-2SHIMOGA : ಸಮನ್ವಯ ಟ್ರಸ್ಟ್‌ ವತಿಯಿಂದ ಐಎಎಸ್‌ ಅಧಿಕಾರಿ ಕೆ.ಎ.ದಯಾನಂದ್‌ ಅವರ ಹೆಸರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಉಚಿತ ವಾಚನಾಲಯ ಸ್ಥಾಪಿಸಲಾಗಿದೆ. ವಿಮಾನ ನಿಲ್ದಾಣದ ರಸ್ತೆಯಲ್ಲಿರುವ ಪೋದಾರ್‌ ಇಂಟರ್‌ನ್ಯಾಷನಲ್‌ ಶಾಲೆ ಸಮೀಪ ಕಟ್ಟಡವನ್ನು ನ.25ರಂದು ಬೆಳಗ್ಗೆ 11.30ಕ್ಕೆ ಲೋಕಾರ್ಪಣೆ ಮಾಡಲಾಗುತ್ತಿದೆ. ಮೈಸೂರಿನ ಶ್ರೀ ಅರ್ಜುನ ಅವಧೂತ, ಗೋಣಿಬೀಡಿನ ಡಾ. ಸಿದ್ದಲಿಂಗ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ವಾಚನಾಲಯ ಉದ್ಘಾಟಿಸಲಿದ್ದಾರೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ.ದಾಯನಂದ್‌, ನಟಿ ಪ್ರೇಮಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಮನ್ವಯ ಟ್ರಸ್ಟ್‌ನ ನಿರ್ದೇಶಕ ಕಾಶಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

samanvaya

PHOTO : ಸಮನ್ವಯ ಟ್ರಸ್ಟ್‌ನ ವಾಚನಾಲಯ

ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಅಹ್ವಾನ

FATAFAT-NEWS-3SHIMOGA : ಜಿಲ್ಲಾ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಸೊರಬ ತಾಲ್ಲೂಕಿನ ಕೋಡಂಬಿ ಮತ್ತು ಹಣಜಿ ಗ್ರಾಮಗಳಲ್ಲಿ ಹೊಸದಾಗಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಿದೆ. ಸೊರಬ ತಹಶೀಲ್ದಾರ್ ಕಚೇರಿ, ಉಪ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಡಿ. 18ರೊಳಗೆ ಸಲ್ಲಿಸುವಂತೆ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಇದನ್ನೂ ಓದಿ – ನಡುರಸ್ತೆಯಲ್ಲೇ ಅರಣ್ಯಾಧಿಕಾರಿಗಳನ್ನು ತಡೆದು ಗ್ರಾಮಸ್ಥರ ಆಕ್ರೋಶ, ಕಾರಣವೇನು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment