Shivamogga LiveShivamogga LiveShivamogga Live
Font ResizerAa
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION
Shivamogga LiveShivamogga Live
Font ResizerAa
  • Home
  • NEWS
  • TALUK NEWS
  • POLITICS
  • SPECIALS NEWS
  • ENGLISH NEWS
  • ADVERTISEMENTS
  • Home
  • NEWS
    • SHIVAMOGGA CITY
    • CRIME NEWS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SHIVAMOGGA
    • BHADRAVATHI
    • THIRTHAHALLI
    • SAGARA
    • HOSANAGARA
    • SORABA
    • SHIKARIPURA
  • POLITICS
  • SPECIALS NEWS
    • AUTOMOBILES
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
  • ENGLISH NEWS
  • ADVERTISEMENTS
    • JOB JUNCTION

Home » ಶಿವಮೊಗ್ಗದ 10 ಫಟಾಫಟ್‌ ನ್ಯೂಸ್‌ | ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

ಶಿವಮೊಗ್ಗದ 10 ಫಟಾಫಟ್‌ ನ್ಯೂಸ್‌ | ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಕಂಪ್ಲೀಟ್‌ ಮಾಹಿತಿ

10/06/2023 10:26 AM
ನಿತಿನ್‌ ಕೈದೊಟ್ಲು

SHIVAMOGGA LIVE | 10 JUNE 2023 | Fatafat News

» ಇವತ್ತಿನ ಎಲ್ಲ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ

ನೂತನ ಉಸ್ತುವಾರಿ ಸಚಿವರಿಗೆ ಕಿಮ್ಮನೆ ಅಭಿನಂದನೆ

Kimmane Rathnakar meets Education Minister Madhu Bangarappa

BENGALURU : ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾಗಿ FATAFAT NEWS 1 jpgನೇಮಕವಾಗಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿಯಾದ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌. ಹೂಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ಕೆಲವು ಹೊತ್ತು ಸಚಿವ ಮಧು ಬಂಗಾರಪ್ಪ ಮತ್ತು ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ಚರ್ಚೆ ನಡೆಸಿದರು.


ಇಬ್ಬರು ಪೊಲೀಸ್‌ ಸಿಬ್ಬಂದಿ ಅಮಾನತು

AYANUR : ಬಾರ್‌ ಕ್ಯಾಶಿಯರ್‌ ಸಚಿನ್‌ ಹತ್ಯೆ ಪ್ರಕರಣದ ಹಿನ್ನೆಲೆ 112 FATAFAT NEWS 2 jpgಇಆರ್‌ಎಸ್‌ ವಾಹನದ ಇಬ್ಬರು ಪೊಲೀಸ್‌ ಸಿಬ್ಬಂದಿಯನ್ನು ಅಮಾನತು ಮಾಡಿ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್‌ ಕುಮಾರ್‌ ಆದೇಶಿಸಿದ್ದಾರೆ. ಪೊಲೀಸರ ಸಮ್ಮುಖದಲ್ಲೇ ಗಲಾಟೆಯಾಗಿ ಹತ್ಯೆ ನಡೆದೆ ಆರೋಪವಿದೆ. ಘಟನೆ ತಪ್ಪಿಸುವ ಅವಕಾಶವಿದ್ದರು ಕರ್ತವ್ಯ ಲೋಪ ಎಸಗಿದ್ದಾರೆ ಎಂಬ ಕಾರಣಕ್ಕೆ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ.


14 ಕೆಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ

DC Dr Selvamani, SP Mithun Kumar IPS meeting about SSLC Exam

SHIMOGA : ಜೂ.12 ರಿಂದ 19ರವರೆಗೆ ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪೂರಕ FATAFAT NEWS 3 jpgಪರೀಕ್ಷೆ ನಡೆಯಲಿದೆ. 3,523 ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 14 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರದ ಸುತ್ತಲು 200 ಮೀ. ವ್ಯಾಪ್ತಿಯಲ್ಲಿ ಸೆಕ್ಷನ್‌ 144ರ ಅನ್ವಯ ನಿಷೇಧಾಜ್ಞೆ ಜಾರಿ. ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸುವಂತೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅಧಿಕಾರಿಗಳಿಗೆ ತಿಳಿಸಿದ್ದಾರೆ.


ಶಿವಮೊಗ್ಗ ನಗರಕ್ಕೆ 25 ಸಾರಿಗೆ ಬಸ್‌ ಒದಗಿಸಿ

Kalluru Megharaj Memorandum about Shimoga City Bus

SHIMOGA : ಜೆ ನರ್ಮ್‌ ಯೋಜನೆ ಅಡಿ ಶಿವಮೊಗ್ಗ ನಗರದಲ್ಲಿ 25 ನಗರ FATAFAT NEWS 4 jpgಸಾರಿಗೆ ಸರ್ಕಾರಿ ಬಸ್ಸುಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಶಾಂತವೇರಿ ಗೋಪಾಲಗೌಡ ಸಮಾಜವಾದಿ ಅಧ್ಯಯನ ಕೇಂದ್ರ ಟ್ರಸ್ಟ್‌ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿತು. ವ್ಯವಸ್ಥಾಪಕ ಟ್ರಸ್ಟಿ ಕಲ್ಲೂರು ಮೇಘರಾಜ್‌ ಸೇರಿದಂತೆ ಹಲವರು ಇದ್ದರು.

ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಕ್ಲಿಕ್‌ ಮಾಡಿ

ಕಾಂತರಾಜ್‌ ಆಯೋಗದ ವರದಿ ಜಾರಿಯಾಗಲಿ

SHIMOGA : ಹಿಂದುಳಿದ ವರ್ಗಗಳ ಶಾಶ್ವತ ಆಯೋಗವು 2013-14ರಲ್ಲಿ FATAFAT NEWS 5 jpgರಾಜ್ಯದಲ್ಲಿ ಶಿಕ್ಷಣ ಮತ್ತು ಸಾಮಾಜಿಕ ಸ್ಥಿತಿಗತಿ ಕುರಿತು ನಡೆಸಿದ್ದ ಸಮೀಕ್ಷಾ ವರದಿಯನ್ನು ರಾಜ್ಯ ಸರ್ಕಾರ ಸ್ವೀಕರಿಸಬೇಕು. ಅದನ್ನು ಜಾರಿ ಮಾಡಬೇಕು ಎಂದು ಹಿಂದುಳಿದ ವರ್ಗಗಳ ಒಕ್ಕೂಟದ ಶಿವಮೊಗ್ಗ ಘಟಕದ ಸಂಚಾಲಕ ಆರ್‌.ಕೆ.ಸಿದ್ದರಾಮಣ್ಣ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.


smg%20live%20views


ಎರಡು ದಿನ ನೀರು ಪೂರೈಕೆ ವ್ಯತ್ಯಯ

Drinking-Water-Tap

SHIMOGA : ಕೃಷ್ಣರಾಜೇಂದ್ರ ಜಲ ಶುದ್ಧೀಕರಣ ಘಟಕಕ್ಕೆ ವಿದ್ಯುತ್‌ FATAFAT NEWS 6 jpgಪೂರೈಕೆ ವ್ಯತ್ಯಯ ಹಿನ್ನೆಲೆ ನಗರದಲ್ಲಿ ಎರಡು ದಿನ ಕುಡಿಯುವ ನೀರು ಸರಬರಾಜು ವ್ಯತ್ಯಯವಾಗಲಿದೆ. ಜೂ.11 ಮತ್ತು 12ರಂದು ನೀರು ಪೂರೈಕೆ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.


ವಿದ್ಯಾರ್ಥಿಗಳ ಜೊತೆ ಸಿನಿಮಾ ವೀಕ್ಷಿಸಿದ ಎಂಎಲ್‌ಎ

Shimoga MLA Channabasappa watches The Kerala Story movie

SHIMOGA : ವೀರಭದ್ರೇಶ್ವರ ಚಿತ್ರಮಂದಿರದಲ್ಲಿ ವಿದ್ಯಾರ್ಥಿಗಳಿಗಾಗಿ ದಿ FATAFAT NEWS 7 jpgಕೇರಳ ಸ್ಟೋರಿ ಸಿನಿಮಾದ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು. ಶಿವಮೊಗ್ಗ ನಗರ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ವಿದ್ಯಾರ್ಥಿಗಳೊಂದಿಗೆ ಸಿನಿಮಾ ವೀಕ್ಷಿಸಿದರು.


ಸೋಮಿನಕೊಪ್ಪದಲ್ಲಿ ಮಾದರಿ ಶಾಲೆ ಉದ್ಘಾಟನೆ

Sominakoppa School Inauguration

SHIMOGA : ಸೋಮನಕೊಪ್ಪದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ FATAFAT NEWS 8 jpgಅಲ್ಪಸಂಖ್ಯಾತರ ಮೌಲಾನಾ ಆಜಾದ್‌ ಮಾದರಿ ಶಾಲೆ ನಿರ್ಮಿಸಲಾಗಿದೆ. ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಶಾಲೆಯನ್ನು ಉದ್ಘಾಟಿಸಿದರು. ಪಾಲಿಕೆ ಸದಸ್ಯೆ ಆಶಾ ಚಂದ್ರಪ್ಪ, ಪ್ರಮುಖರಾದ ಚಂದ್ರಪ್ಪ, ರಾಜು, ಗಣೇಶ್‌, ವಸಂತ ಕುಮಾರ್‌ ಸೇರಿದಂತೆ ಹಲವರು ಇದ್ದರು.


ಕನಸಿನಕಟ್ಟೆ ಗ್ರಾಮಸ್ಥರಿಂದ ಪ್ರತಿಭಟನೆ

Kanasinakatte Villagers Protest in Shimoga

SHIMOGA : ಮೂಲ ಸೌಕರ್ಯಕ್ಕೆ ಆಗ್ರಹಿಸಿ ಭದ್ರಾವತಿ ತಾಲೂಕು FATAFAT NEWS 9 jpgಕನಸಿನಕಟ್ಟೆ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಸಮರ್ಪಕ ಬಸ್‌ ಸೌಕರ್ಯವಿಲ್ಲ, ಸ್ಮಶಾನದ ಜಾಗಕ್ಕೆ ವ್ಯಕ್ತಿಯೊಬ್ಬರು ಪಹಣಿ ಮಾಡಿಸಿಕೊಂಡಿದ್ದಾರೆ, ಮೊಬೈಲ್‌ ನೆಟ್‌ವರ್ಕ್‌ ಸಮಸ್ಯೆ, ಇದರಿಂದಾಗಿ ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್‌ ನೀಡಿ ಪಡಿತರ ಪಡೆಯಲು ಸಮಸ್ಯೆಯಾಗುತ್ತಿದೆ ಎಂದು ಗ್ರಾಮಸ್ಥರು ಆರೋಪಿಸಿದರು. ಈಚೆಗೆ ನಡೆದ ವಿಧಾನಸಭೆ ಚುನಾವಣೆಯನ್ನೂ ಬಹಿಷ್ಕರಿಸಿ ಗ್ರಾಮಸ್ಥರು ಹೋರಾಟ ಮಾಡಿದ್ದರು.

ಇದನ್ನೂ ಓದಿ – ಅರ್ಧಕ್ಕರ್ಧ ಶಿವಮೊಗ್ಗ ತಾಲೂಕಿನಲ್ಲಿ ಜೂ.11ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ


ಗಾಂಧಿನಗರದಲ್ಲಿ ಮಾಂಗಲ್ಯ ಸರ ಕದ್ದವನು ಅರೆಸ್ಟ್

gold chain theft thief arrested by Jayanagara Police

SHIMOGA : ಗಾಂಧಿ ನಗರದ 3ನೇ ಅಡ್ಡರಸ್ತೆಯಲ್ಲಿ ಮನೆಯಲ್ಲಿ ಇಟ್ಟಿದ್ದ FATAFAT NEWS 10 jpgಚಿನ್ನದ ಸರ ಕಳ್ಳತನ ಮಾಡಿದ್ದ ಆರೋಪಿಯನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ನವುಲೆಯ ಚೇತನ್‌ (32) ಬಂಧಿತ. ಈತನಿಂದ 3.40 ಲಕ್ಷ ರೂ. ಮೌಲ್ಯದ 68 ತೂಕದ ಬಂಗಾರದ ಮಾಂಗಲ್ಯ ಸರವನ್ನು ವಶಕ್ಕೆ ಪಡೆಯಲಾಗಿದೆ. ಇನ್ಸ್‌ಪೆಕ್ಟರ್‌ ಮಾದಪ್ಪ, ಎಎಸ್‌ಐ ಕರಿಬಸಪ್ಪ, ಸಿಬ್ಬಂದಿ ಆದರ್ಶ, ರೋಷನ್‌, ರವಿಕಿರಣ್‌ ಅವರ ತಂಡ ಆರೋಪಿಯನ್ನು ಬಂಧಿಸಿದೆ. ‌

ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಲು ಕ್ಲಿಕ್‌ ಮಾಡಿ

 

ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» ಶಿವಮೊಗ್ಗ ಲೈವ್‌ gmail

[email protected]

» Whatsapp Number

7411700200

 

 

Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ. ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..! ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ. ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ. ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article power cut mescom ELECTRICITY ಅರ್ಧಕ್ಕರ್ಧ ಶಿವಮೊಗ್ಗ ತಾಲೂಕಿನಲ್ಲಿ ಜೂ.11ರಂದು ಬೆಳಗ್ಗೆಯಿಂದ ಸಂಜೆವರೆಗೆ ಕರೆಂಟ್‌ ಇರಲ್ಲ
Next Article DINA-BHAVISHYA ದಿನ ಭವಿಷ್ಯ | 11 ಜೂನ್‌ 2023 | ಇವತ್ತು ಯಾವ್ಯಾವ ರಾಶಿಯವರಿಗೆ ಹೇಗಿದೆ ಭವಿಷ್ಯ?

ಇದನ್ನೂ ಓದಿ

GOOD-MORNING-SHIVAMOGGA-NEWS-UPDATE
1 MINUTE NEWS

ಶುಭೋದಯ ಶಿವಮೊಗ್ಗ – ಜಿಲ್ಲೆಯ ಪ್ರಮುಖ ಸುದ್ದಿಗಳು ಒಂದೇ ಕ್ಲಿಕ್‌ನಲ್ಲಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
28/04/2025
9-AM-FATAFAT-NEWS.webp
1 MINUTE NEWSBHADRAVATHISAGARA

ಅಡಿಕೆ ಖೇಣಿದಾರರ ಸಮಾವೇಶ | ಕಾಗೋಡು ತಿಮ್ಮಪ್ಪಗೆ ಸನ್ಮಾನ – 3 ಫಟಾಫಟ್‌ ಸುದ್ದಿಗಳು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
14/03/2025
5-PM-FATAFAT-NEWS.webp
1 MINUTE NEWSSHIVAMOGGA CITY

ಅರ್ಚಕ ವಿನಾಯಕ ಬಾಯರಿ ನಿಧನ | ನಾಳೆ ಜನತಾ ಪ್ರಣಾಳಿಕ ಬಿಡುಗಡೆ – 5 ಫಟಾಫಟ್‌ ಸುದ್ದಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
01/03/2025
9-AM-FATAFAT-NEWS.webp
1 MINUTE NEWSSHIVAMOGGA CITY

ಶಿವಮೊಗ್ಗದ ಪತ್ರಕರ್ತರಿಗೆ ಪ್ರಶಸ್ತಿ ಪ್ರಕಟ | ಮುದಸ್ಸಿರ್‌ ಅಹ್ಮದ್‌ಗೆ ಪ್ರಶಸ್ತಿ ಪ್ರದಾನ | ಬೆಜ್ಜವಳ್ಳಿಯಲ್ಲಿ ಜನ ಸಂಪರ್ಕ ಸಭೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
01/03/2025
9-AM-FATAFAT-NEWS.webp
1 MINUTE NEWS

ತುಂಗಾ ಡ್ಯಾಂಗೆ 11 ಲಕ್ಷ ಮೀನು ಮರಿ | ಆಶ್ರಯ ಸಮಿತಿಗೆ ನೇಮಕ | ವಾಹನ ಡಿಕ್ಕಿ, ಜಿಂಕೆ ಸಾವು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
03/02/2025
GOOD-MORNING-SHIVAMOGGA-NEWS-UPDATE
1 MINUTE NEWS

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಒಂದೇ ಕ್ಲಿಕ್‌ನಲ್ಲಿ ಎಲ್ಲ ಸುದ್ದಿ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
21/12/2024
Previous Next

ಶಿವಮೊಗ್ಗ ಲೈವ್ ಗ್ರೂಪ್ ಸೇರಲು ಕ್ಲಿಕ್ ಮಾಡಿ

🟢 shivamoggalive.com

whatsapp-logo
Shivamogga-Live-Logo-New-Logo
Welcome Back!

Sign in to your account

Username or Email Address
Password

Lost your password?