ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 15 JUNE 2023 | FATAFAT NEWS
ಶಿವಮೊಗ್ಗ ಮೆಸ್ಕಾಂ ಕಚೇರಿಗೆ ಕಲ್ಲು ತೂರಾಟ
SHIMOGA : ವಿದ್ಯುತ್ ದರ ಹೆಚ್ಚಳ ಖಂಡಿಸಿ ಶಿವಮೊಗ್ಗ ನಗರ ಬಿಜೆಪಿ ವತಿಯಿಂದ ರೈಲ್ವೆ ನಿಲ್ದಾಣದ ಬಳಿ ಇರುವ ಮೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಲಾಯಿತು. ಈ ವೇಳೆ ಕೆಲವು ಬಿಜೆಪಿ ಕಾರ್ಯಕರ್ತರು ಮೆಸ್ಕಾಂ ಕಚೇರಿಯ ಕಿಟಕಿ ಮತ್ತು ನೊಟೀಸ್ ಬೋರ್ಡ್‌ನ ಗಾಜುಗಳಿಗೆ ಕಲ್ಲು ತೂರಿದರು. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಯಿತು. ಶಾಸಕ ಚನ್ನಬಸಪ್ಪ, ಮೇಯರ್ ಶಿವಕುಮಾರ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.
ಇದನ್ನೂ ಓದಿ – ಶಿವಮೊಗ್ಗ ಮೆಸ್ಕಾಂ ಕಚೇರಿಗೆ ಕಲ್ಲು ತೂರಿದ ಬಿಜೆಪಿ ಕಾರ್ಯಕರ್ತರು, MLA ಸೇರಿ ಹಲವರು ವಶಕ್ಕೆ
ವಿದ್ಯುತ್ ದರ ಹೆಚ್ಚಳಕ್ಕೆ ಆಕ್ರೋಶ
SHIMOGA : ಉಚಿತವಾಗಿ ವಿದ್ಯುತ್ ಕೊಡುತ್ತೇವೆ ಎಂದು ಭರವಸೆ ನೀಡಿದ್ದ ಸರ್ಕಾರ ಪ್ರತಿ ಯುನಿಟ್ ವಿದ್ಯುತ್ ದರವನ್ನು ಹೆಚ್ಚಳ ಮಾಡಿದೆ. ಇದನ್ನು ಖಂಡಿಸಿ ಬಿಜೆಪಿ ನಗರ ಘಟಕದ ವತಿಯಿಂದ ರೈಲ್ವೆ ನಿಲ್ದಾಣದ ಬಳಿ ಇರುವ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು. ಶಾಸಕರಾದ ಎಸ್.ಎನ್.ಚನ್ನಬಸಪ್ಪ, ಎಸ್.ರುದ್ರೇಗೌಡ, ಡಿ.ಎಸ್.ಅರುಣ್ ಸೇರಿದಂತೆ ಹಲವರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ – ವಿದ್ಯುತ್ ದರ ಹೆಚ್ಚಳ, ಮೆಸ್ಕಾಂ ಕಚೇರಿ ಮುಂದೆ ಪ್ರತಿಭಟನಾ ಸಭೆ, MLA ಹೇಳಿದ್ದೇನು? ಉಳಿದವರ ಆರೋಪಗಳೇನು?
ಕಲ್ಲು ಹೊಡೆಯೋದು ತಪ್ಪು, ನೇತೃತ್ವ ವಹಿಸಿದವರನ್ನು ಬಂಧಿಸಲಿ
SHIMOGA : ಮೆಸ್ಕಾಂ ಕಚೇರಿಗೆ ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ಮಾಡಿದ್ದಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೇಳೂರು ಗೋಪಾಲಕೃಷ್ಣ, ಬಿಜೆಪಿ ಅಧಿಕಾರವಧಿಯಲ್ಲಿ ಎಲ್ಲದರ ಬೆಲೆ ಹೆಚ್ಚಳ ಮಾಡಿದ್ದಾರೆ. ವಿರೋಧ ಪಕ್ಷವಾಗಿ ಹೋರಾಟ ನಡೆಸಲು ಅವಕಾಶವಿದೆ. ಆದರೆ ಕಲ್ಲು ಹೊಡೆಯುವುದು ತಪ್ಪು. ಪ್ರತಿಭಟನೆಯ ನೇತೃತ್ವ ವಹಿಸಿದ್ದವರನ್ನು ಬಂಧಿಸಬೇಕು ಎಂದು ಆಗ್ರಹಿಸಿದರು.
ನೂತನ ಅಂಗನವಾಡಿ ಉದ್ಘಾಟನೆ
KR PURAM : ನೂತನ ಅಂಗನವಾಡಿ ಕಟ್ಟಡವನ್ನು ಶಾಸಕ ಎಸ್.ಎನ್.ಚನ್ನಬಸಪ್ಪ ಉದ್ಘಾಟಿಸಿದರು. ಇದೆ ವೇಳೆ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕೊಠಡಿಗಳ ಗುದ್ದಲಿ ಪೂಜೆ ನೆರವೇರಿಸಿದರು. ಮಹಾನಗರ ಪಾಲಿಕೆ ಮೇಯರ್ ಶಿವಕುಮಾರ್, ಪಾಲಿಕೆ ಸದಸ್ಯೆ ಸುನಿತಾ ಅಣ್ಣಪ್ಪ ಸೇರಿದಂತೆ ಹಲವರು ಇದ್ದರು.
ನೆಹರು ರಸ್ತೆ ವರ್ತಕರ ಸಂಘಕ್ಕೆ ಚಾಲನೆ
NEHRU ROAD : ನೆಹರು ರಸ್ತೆ ವರ್ತಕರ ಸಂಘಕ್ಕೆ ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಚಾಲನೆ ನೀಡಿದರು. ಇಲ್ಲಿನ ಪವನ್ ಹೊಟೇಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಘವನ್ನು ಉದ್ಘಾಟಿಸಲಾಯಿತು. ಇದೆ ವೇಳೆ ಶಾಸಕ ಚನ್ನಬಸಪ್ಪ ಅವರನ್ನು ಅಭಿನಂದಿಸಲಾಯಿತು. ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕ ಸಂಘದ ಅಧ್ಯಕ್ಷ ಗೋಪಿನಾಥ್, ಪಾಲಿಕೆ ಸದಸ್ಯೆ ಮೀನಾ ಗೋವಿಂದರಾಜ್, ಸಂಘದ ಪದಾಧಿಕಾರಿಗಳು, ಸದಸ್ಯರು ಇದ್ದರು.
ಪುರಲೆ, ಹರಿಗೆ ಕೆರೆಗಳ ಕಾಲುವೆ ಕಾಮಗಾರಿ ಪರಿಶೀಲನೆ
SHIMOGA : ಮಳೆಗಾಲದಲ್ಲಿ ಪುರಲೆ ಕೆರೆ ಮತ್ತು ಹರಿಗೆ ಕೆರೆ ಕೋಡಿ ಬಿದ್ದು ಅಕ್ಕಪಕ್ಕದ ಬಡಾವಣೆಗಳಿಗೆ ನೀರು ನುಗ್ಗುತ್ತದೆ. ಇದನ್ನ ತಡೆಯಲು ಕಾಲುವೆ ಕಾಮಗಾರಿ ನಡೆಸಲಾಗುತ್ತಿದೆ. ಶಾಸಕ ಚನ್ನಬಸಪ್ಪ ಅವರು ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಧಿಕಾರಿಗಳಿಂದ ಕಾಮಗಾರಿ ಕುರಿತು ಮಾಹಿತಿ ಪಡೆದರು. ಮೇಯರ್ ಶಿವಕುಮಾರ್, ಪಾಲಿಕೆ ಸದಸ್ಯ ಲಕ್ಷ್ಮಣ್, ಮಾಜಿ ಸದಸ್ಯ ಮೋಹನ್ ರೆಡ್ಡಿ ಸೇರಿದಂತೆ ಹಲವರು ಇದ್ದರು.
ಆರ್ಯ ಈಡಿಗ ವಿದ್ಯಾರ್ಥಿ ನಿಲಯ ಉದ್ಘಾಟನೆ
BAPUJI NAGAR : ಶಿವಮೊಗ್ಗದ ಬಾಪೂಜಿ ನಗರದಲ್ಲಿ ಆರ್ಯ ಈಡಿಗ ಬಾಲಕರ ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸಲಾಯಿತು. ಸಿಗಂದೂರು ಶ್ರೀ ಚೌಡೇಶ್ವರಿ ದೇವಸ್ಥಾನದ ಧರ್ಮದರ್ಶಿ ಡಾ.ರಾಮಪ್ಪ ಮತ್ತು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ವಿದ್ಯಾರ್ಥಿ ನಿಲಯವನ್ನು ಉದ್ಘಾಟಿಸಿದರು.
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿಡಿ.ಹೆಚ್.ಶಂಕರಮೂರ್ತಿಗೆ ನಾಗರಿಕ ಅಭಿನಂದನೆ
SHIMOGA : ಶಿವಮೊಗ್ಗ ಸಿಟಿಜನ್ ಫೋರಂ ವತಿಯಿಂದ ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿರವರಿಗೆ ಜೂ.20ರಂದು ಸಂಜೆ 6 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ನಾಗರಿಕ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಫೋರಂ ಅಧ್ಯಕ್ಷ ಹಾಗೂ ವಕೀಲ ಕೆ. ಬಸಪ್ಪ ಗೌಡ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಸಭಾ ಸದಸ್ಯ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಸಾನ್ನಿಧ್ಯ ವಹಿಸಿಕೊಂಡು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದರು.
‘ಮುಂದಿನ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳೋಣʼ
SHIMOGA : ಬೈಪಾಸ್ ರಸ್ತೆಯಲ್ಲಿರುವ ಕ್ರೌನ್ ಪ್ಯಾಲೆಸ್‌ನಲ್ಲಿ ಎಸ್‌ಡಿಪಿಐ ಸಂಘಟನೆಯ ಕಾರ್ಯಕರ್ತರ ಸಮಾವೇಶ ನಡೆಯಿತು. ಮುಖ್ಯ ಭಾಷಣ ಮಾಡಿದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ, ವಿಧಾನಸಭೆ ಚುನಾವಣೆಯಲ್ಲಿ 16 ಕ್ಷೇತ್ರಗಳಲ್ಲಿ ಒಟ್ಟು 1 ಲಕ್ಷ ಮತಗಳು ಬಂದಿವೆ. ಇದು ನಮ್ಮ ಸಂಘಟನೆಗೆ ಸ್ಥೈರ್ಯ ತುಂಬಿದೆ ಎಂದರು. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಮಾತನಾಡಿ, ಪಕ್ಷದ ಕಾರ್ಯಕರ್ತರು ಎದೆಗುಂದದೆ ಮುಂದಿನ ಚುನಾವಣೆಗಳಲ್ಲಿ ಕೆಲಸ ನಿರ್ವಹಿಸಲು ಸಿದ್ಧರಾಗಬೇಕು ಎಂದರು. ಜಿಲ್ಲಾಧ್ಯಕ್ಷ ಇಮ್ರಾನ್, ಉಪಾಧ್ಯಕ್ಷ ದೇವೇಂದ್ರ ಪಾಟೀಲ್, ಪಾಲಿಕೆ ಸದಸ್ಯೆ ಶಬಾನಾ ಖಾನಂ ಸೇರಿ ಹಲವರು ಇದ್ದರು.
ಟೆಂಪೊ ಟ್ರಾವೆಲ್ಲರ್ ಮ್ಯೂಸಿಕ್ ಸಿಸ್ಟಮ್ ಕಳ್ಳತನ
SHIMOGA : ನಗರದ ಸರ್ಕ್ಯೂಟ್ ಹೌಸ್ ಸಮೀಪ ಫುಟ್ ಪಾತ್ ಬಳಿ ನಿಲ್ಲಿಸಿದ್ದ ಟೆಂಪೋ ಟ್ರಾವಲರ್ ಗಾಜಿನ ಕಿಟಕಿಯ ಲಾಕ್ ಮುರಿದು ಮ್ಯೂಸಿಕ್ ಸಿಸ್ಟಮ್ ಕಳ್ಳತನ ಮಾಡಲಾಗಿದೆ. ಸುರೇಶ್ ಎಂಬುವವರಿಗೆ ಸೇರಿದ ವಾಹನದಲ್ಲಿ ಕಳ್ಳತನವಾಗಿದೆ. ಪ್ರವಾಸ ಮುಗಿಸಿ ರಾತ್ರಿ ಟೆಂಪೊ ಟ್ರಾವೆಲರನ್ನು ತಂದು ನಿಲ್ಲಿಸಿ, ಸಹೋದರಿಯ ಮನೆಗೆ ಹೋಗಿದ್ದರು. ಮರುದಿನ ಬೆಳಗ್ಗೆ ಬಂದು ನೋಡಿದಾಗ ಕಳ್ಳತನವಾಗಿರುವುದು ಗೊತ್ತಾಗಿದೆ. 20 ಸಾವಿರ ರೂ. ಮೌಲ್ಯದ ಮ್ಯೂಸಿಕ್ ಸಿಸ್ಟಮ್ ಕಳ್ಳತನವಾಗಿದೆ ಎಂದು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422