ಇದನ್ನೂ ಓದಿ – ದಿನ ಭವಿಷ್ಯ | ಇವತ್ತು ಈ ರಾಶಿಯವರು ಪೊಲೀಸ್ ಠಾಣೆ ಮೆಟ್ಟಿಲೇರಬೇಕಾಗುತ್ತದೆ, ಯಾವ್ಯಾವ ರಾಶಿಗೆ ಈ ದಿನ ಹೇಗಿದೆ?
ಸಚಿವ ಸ್ಥಾನ ನೀಡದಿದ್ದರೆ ಭದ್ರಾವತಿಯಲ್ಲಿ ಹೋರಾಟ
SHIMOGA : ಭದ್ರಾವತಿ ಶಾಸಕ ಸಂಗಮೇಶ್ವರ್ ಅವರಿಗೆ ಸಚಿವ ಸ್ಥಾನ ನೀಡಬೇಕು. ಇಲ್ಲವಾದಲ್ಲಿ ಕ್ಷೇತ್ರದಲ್ಲಿ ಹೋರಾಟ ನಡೆಸಲಾಗುತ್ತದೆ ಎಂದು ಸಂಗಮೇಶ್ವರ್ ಅವರ ಬೆಂಬಲಿಗರು ಮತ್ತು ಕಾಂಗ್ರೆಸ್ ಮುಖಂಡರು ಪತ್ರಿಕಾಗೋಷ್ಠಿಯಲ್ಲಿ ಹೈಕಮಾಂಡ್‌ಗೆ ಎಚ್ಚರಿಕೆ ನೀಡಿದ್ದಾರೆ. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾದ ಷಡಾಕ್ಷರಿ, ಮಣಿಶೇಖರ್, ಪ್ರಮುಖರಾದ ರವಿಕುಮಾರ್ ಸೇರಿದಂತೆ ಹಲವರು ಸುದ್ದಿಗೋಷ್ಠಿಯಲ್ಲಿದ್ದರು.
ಇದನ್ನೂ ಓದಿ – ʼಮಂತ್ರಿ ಆಗ್ತಾರೆ ಅಂತಾ ಜನ ಮತ ನೀಡಿದ್ದಾರೆ, ಕೈ ತಪ್ಪಿದರೆ ಹೋರಾಟಕ್ಕೆ ಸಿದ್ಧವಾಗಲಿದೆ ರೂಪುರೇಷೆʼ
ಎಸ್ಸೆಸ್ಸೆಲ್ಸಿ, ಪಿಯುಸಿ ಪಾಸಾದವರಿಗೆ ಪ್ರತಿಭಾ ಪುರಸ್ಕಾರ
SHIMOGA : ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸಂಘದ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90 ಮೇಲ್ಪಟ್ಟು ಅಂಕ ಪಡೆದವರಿಗೆ ರಾಜ್ಯ ಸಂಘದಿಂದ ಮತ್ತು ಶೇ.80% ಮೇಲ್ಪಟ್ಟು ಅಂಕ ಪಡೆದವರಿಗೆ ಜಿಲ್ಲಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮಾಡಲು ನಿರ್ಣಯಿಸಲಾಗಿದೆ. ಮಕ್ಕಳ ಅಂಕಪಟ್ಟಿ, ಸದಸ್ಯತ್ವ ಕಾರ್ಡ್ ಜೆರಾಕ್ಸ್, ಆಧಾರ್ ಕಾರ್ಡ್ ಪ್ರತಿಯೊಂದಿಗೆ ಜಿಲ್ಲಾ ಸಂಘದ ಅಧ್ಯಕ್ಷರು / ಕಾರ್ಯದರ್ಶಿ ಬಳಿ ಮೇ 25ರೊಳಗೆ ತಲುಪಿಸುವಂತೆ ಸಂಘದ ಪ್ರಧಾನ ಕಾರ್ಯದರ್ಶಿ ಅರುಣ್ ವಿ.ಟಿ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸಿಹಿ ಹಂಚಿದ ವಕೀಲರು
SHIMOGA : ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಈ ಹಿನ್ನೆಲೆ ಶಿವಮೊಗ್ಗದಲ್ಲಿ ವಕೀಲರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು. ನ್ಯಾಯಾಲಯದ ಆವರಣದಲ್ಲಿರುವ ವಕೀಲರ ಭವನದಲ್ಲಿ ಸಿಹಿ ಹಂಚಲಾಯಿತು. ಕೆಪಿಸಿಸಿ ಸಂಚಾಲಕ ಎಸ್.ಎನ್. ಮೂರ್ತಿ, ಹಿರಿಯ ವಕೀಲರಾದ ಜೆ. ಸೋಮಶೇಖರ್, ಹರಿಪ್ರಸಾದ್ ಕೆ.ಎನ್, ಭರತ್ ಬೆಳ್ಳಿಯಪ್ಪ, ವೈ.ಬಿ. ಚಂದ್ರಕಾಂತ್, ಪೂರ್ಣೇಶ್, ಚಂದ್ರಕುಮಾರ್ ಮತ್ತಿತರರಿದ್ದರು.
ಜೈಲ್ ಸರ್ಕಲ್‌ನಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
SHIMOGA : ಜೈಲ್ ಸರ್ಕಲ್‌ನಲ್ಲಿರುವ ಕರ್ನಾಟಕದ ಧ್ವಜ ಸ್ತಂಭ ತೆರವು ಮಾಡಲು ಮುಂದಾದ ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಯಿತು. ಧ್ವಜ ಸ್ತಂಭ ತೆರವುಗೊಳಿಸುವುದನ್ನು ವಿರೋಧಿಸಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಯಿತು. ವಿವಿಧ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರು, ಪಾಲಿಕೆ ಸದಸ್ಯೆ ರೇಖಾ ರಂನಗಾಥ್ ಅವರು ಪ್ರತಿಭಟನೆಯಲ್ಲಿದ್ದರು. ಧ್ವಜ ಸ್ತಂಭದ ಕಟ್ಟೆಯನ್ನು ಜೆಸಿಬಿ ಮೂಲಕ ಒಡೆಯಲಾಗಿತ್ತು. ಪ್ರತಿಭಟನೆ ಹಿನ್ನೆಲೆ ತೆರವು ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.
ಇದನ್ನೂ ಓದಿ – ಜೈಲ್ ಸರ್ಕಲ್‌ನಲ್ಲಿ ದಿಢೀರ್ ಪ್ರತಿಭಟನೆ, ಟೈರ್‌ಗೆ ಬೆಂಕಿ ಹಚ್ಚಿ ಸ್ಮಾರ್ಟ್ ಸಿಟಿ ಅಧಿಕಾರಿಗಳ ವಿರುದ್ಧ ಘೋಷಣೆ, ಆಗಿದ್ದೇನು?
ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು
THIRTHAHALLI : ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ. ತಳುವೆಯ ಶಾಲೆ ಸಮೀಪ ಘಟನೆ ಸಂಭವಿಸಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದರು ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿಯಿಂದ ಕೊಪ್ಪ ಕಡೆಗೆ ತೆರಳುತ್ತಿದ್ದಾಗ ಅಪಘಾತವಾಗಿದೆ. ಕಾರಿನಲ್ಲಿ ಏರ್ ಬ್ಯಾಗ್ ಓಪನ್ ಆಗಿದ್ದರಿಂದ ಚಾಲಕ ಪ್ರಾಣಪಾಯದಿಂದ ಪಾರಾಗಿದ್ದಾರೆ. ಅವರನ್ನು ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಇದನ್ನೂ ಓದಿ – ತೀರ್ಥಹಳ್ಳಿಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ನೆಜ್ಜೂರು ದೇವಸ್ಥಾನದ ಪ್ರತಿಷ್ಠಾಪನಾ ಮಹೋತ್ಸವ
SAGARA : ಮೇ 23 ರಿಂದ 25ರವರೆಗೆ ನೆಜ್ಜೂರು ಗಂಗಾ ಪರಮೇಶ್ವರಿ ದೇವಸ್ಥಾನದ ಪ್ರತಿಷ್ಟಾಪನಾ ಮಹೋತ್ಸವ ನಡೆಯಲಿದೆ. 25 ಲಕ್ಷ ರೂ. ವೆಚ್ಚದಲ್ಲಿ ದೇವಸ್ಥಾನ ನಿರ್ಮಾಣ ಮಾಡಲಾಗಿದೆ. ಪ್ರತಿಷ್ಠಾಪನಾ ಮಹೋತ್ಸವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು, ಗಣ್ಯರಿಗೆ ಸನ್ಮಾನ, ಮೆರವಣಿಗೆ ನಡೆಯಲಿದೆ ಎಂದು ರಾಷ್ಟ್ರೀಯ ಮೀನುಗಾರರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಡಿ.ರವಿಕುಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಬಂದೂಕು ಹಿಂಪಡೆಯುವಂತೆ ಪೊಲೀಸರ ಸೂಚನೆ
THIRTHAHALLI : ವಿಧಾನಸಭೆ ಚುನಾವಣೆ ಹಿನ್ನೆಲೆ ಪರವಾನಗಿ ಹೊಂದಿರುವ ಬಂದೂಕುಗಳುನ್ನು ಪೊಲೀಸ್ ಠಾಣೆಯಲ್ಲಿ ಇರಿಸಲಾಗಿತ್ತು. ತೀರ್ಥಹಳ್ಳಿ ತಾಲೂಕಿನಲ್ಲಿ 880 ಬಂದೂಕುಗಳನ್ನು ಡೆಪಾಸಿಟ್ ಮಾಡಲಾಗಿತ್ತು. ಮೇ 23ರಿಂದ ಬಂದೂಕುಗಳನ್ನು ಪರವಾನಗಿ ಹೊಂದಿರುವವರಿಗೆ ಮರಳಿಸಲಾಗುತ್ತದೆ. ಆಧಾರ್ ಕಾರ್ಡ್ ನಂಬರ್, ಪಾಸ್ ಪೋರ್ಟ್ ಅಳತೆಯ ಫೋಟೊದೊಂದಿಗೆ ಬಂದು ಬಂದೂಕು ಹಿಂಪಡೆಯಬಹುದು ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಮತದಾರರು, ಬಿಜೆಪಿ ಕಾರ್ಯಕರ್ತರಿಗೆ ಕೃತಜ್ಞತಾ ಸಮಾವೇಶ
SHIKARIPURA : ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ಅವರ ಗೆಲುವು ಹಿನ್ನೆಲೆ ಮತದಾರರು ಮತ್ತು ಕಾರ್ಯಕರ್ತರಿಗೆ ಕೃತಜ್ಞತಾ ಸಮಾರಂಭ ಆಯೋಜಿಸಲಾಗಿತ್ತು. ಶಿಕಾರಿಪುರದ ಮಂಗಳ ಭವನದ ಹಿಂಭಾಗ ಮೈದಾನದಲ್ಲಿ ಸಮಾರಂಭ ನಡೆಯಿತು. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದೆ ವೇಳೆ ನೂತನ ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಸನ್ಮಾನಿಸಲಾಯಿತು.
ಅಪಪ್ರಚಾರಕ್ಕೆ ಕಿವಿಗೊಡದೆ ತಕ್ಕ ಉತ್ತರ ಕೊಟ್ಟಿದ್ದಾರೆ
SHIKARIPURA : ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಅಭ್ಯರ್ಥಿ ಬಿ.ವೈ.ವಿಜಯೇಂದ್ರ ವಿರುದ್ಧ ಅಪಪ್ರಚಾರ ನಡೆಸಲಾಯಿತು. ಆದರೆ ಮತದಾರರು ಇದ್ಯಾವುದಕ್ಕು ಕಿವಿಗೊಡದೆ ವಿಜಯೇಂದ್ರ ಅವರನ್ನು ಗೆಲ್ಲಿಸಿ ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಮಾಜಿ ಮುಖ್ಯಮಂತಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಕೃತಜ್ಞತಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಾಲೂಕು ಕಚೇರಿಯಲ್ಲಿ ಶಾಸಕರ ಕಚೇರಿ ತೆರೆಯಲಾಗುತ್ತದೆ. ಅಲ್ಲಿ ವಿಜಯೇಂದ್ರ ಅವರು ಜನರ ಅಹವಾಲು ಆಲಿಸಲಿದ್ದಾರೆ. ಮುಂದೆ ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗಳನ್ನು ಸವಾಲಾಗಿ ಸ್ವೀಕರಿಸಿ ಪಕ್ಷವನ್ನು ಗೆಲ್ಲಿಸಬೇಕಿದೆ ಎಂದರು.
ವಿಡಿಯೋ ಮಾಡಿ ಅಪಪ್ರಚಾರ ನಡೆಸಿದ್ದರು
SHIKARIPURA : ವಿಧಾನಸಭೆ ಚುನಾವಣೆ ವೇಳೆ ನಮ್ಮ ಕುಟುಂಬದ ವಿರುದ್ಧ ವಿಡಿಯೋಗಳನ್ನು ಮಾಡಿ ಅಪಪ್ರಚಾರ ನಡೆಸಲಾಯಿತು. ಆದರೆ ಕಾರ್ಯಕರ್ತರು, ಮತದಾರರು ಏಳು ಸುತ್ತಿನ ಕೋಟೆಯ ಹಾಗೆ ನಿಂತು ಶ್ರೀರಕ್ಷೆ ನೀಡಿದ್ದಾರೆ. ಸರ್ಕಾರ ಬದಲಾಗಿದ್ದರೂ ಕ್ಷೇತ್ರದ ಅಭಿವೃದ್ಧಿಗೆ ಹಿನ್ನಡೆ ಆಗದಂತೆ ಕೆಲಸ ನಿರ್ವಹಿಸುತ್ತೇವೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200