ಧಾರ್ಮಿಕ ಗುರುಗಳ ವಿರುದ್ಧ ಸುಳ್ಳು ದೂರು, ಪ್ರತಿಭಟನೆ
SHIMOGA : ಮುಸ್ಲಿಂ ಧಾರ್ಮಿಕ ಗುರು ಮುಫ್ತಿ ಸಲ್ಮಾನ್ ಅಜ್ಹರಿ ಹಾಗು ಹಜರತ್ ಖಮರ್ ಉಸ್ಮಾನಿ ಅವರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಶಿವಮೊಗ್ಗದ ಮರ್ಕಜಿ ಸುನ್ನಿ ಜಾಮಿಯಾ ಮಸ್ಜಿದ್ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ದರ್ಗಾ ಮೈದಾನದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು. ಮುಫ್ತಿ ಸಲ್ಮಾನ್ ಅಜ್ಹರಿ ಅವರು ಗಝಲಿನ ರೂಪದಲ್ಲಿ ವಿಷಯಗಳನ್ನು ಮಂಡಿಸಿದ್ದರು. ಅದರಲ್ಲಿ ಧರ್ಮವನ್ನು ದ್ವೇಷಿಸುವ ಅಂಶಗಳಿವೆ ಎಂದು ಸುಳ್ಳು ಪ್ರಕರಣ ದಾಖಲಿಸಿ ಆರೋಪಿಸಿ ಬಂಧಿಸಲಾಗಿದೆ. 7 ತಿಂಗಳ ಹಿಂದೆ ಧಾರ್ಮಿಕ ಗುರು ಹಜರತ್ ಖಮರ್ ಉಸ್ಮಾನಿ ಅವರನ್ನು ಇದೇ ರೀತಿ ಬಂಧಿಸಲಾಗಿತ್ತು ಎಂದು ಪ್ರತಿಭಟನಾಕಾರರು ಆರೋಪಿಸಿದರು. ಪ್ರತಿಭಟನೆಯಲ್ಲಿ ಜಾಮೀಯ ಮಸೀದಿಯ ಅಧ್ಯಕ್ಷ ಮುನ್ನಾವರ್ ಪಾಶಾ, ಸತ್ತಾರ್ ಬೇಗ್, ಖಾಜಿ ಅಶ್ರಫ್ ಸಾಬ್, ಮುಫ್ತಿ ಅಖಿಲ್ ರಜತ್, ಅಶ್ರಫ್ ಅಹಮ್ಮದ್ ಸೇರಿದಂತೆ ಇನ್ನಿತರರು ಇದ್ದರು.
ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್ ಕ್ಲಿಕ್ ಮಾಡಿ ⇓
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200