ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
FATAFAT SHIMOGA NEWS
ಡಿಸಿಸಿ ಬ್ಯಾಂಕಿಗೆ ಮಂಜುನಾಥಗೌಡ ರೀ ಎಂಟ್ರಿ
SHIMOGA : ಆರ್.ಎಂ.ಮಂಜುನಾಥಗೌಡ ಅವರನ್ನು ಡಿಸಿಸಿ ಬ್ಯಾಂಕ್ ನಿರ್ದೇಶಕ ಸ್ಥಾನದಿಂದ ಅನರ್ಹಗೊಳಿಸಿದ್ದ ಜಂಟಿ ನಿಬಂಧಕರ ಅದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಇವತ್ತು ನ್ಯಾಯಾಲಯದ ಆದೇಶದ ಪ್ರತಿಯನ್ನು ಆರ್.ಎಂ.ಮಂಜುನಾಥ ಗೌಡ ಅವರು ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರಿಗೆ ತಲುಪಿಸಿದರು. ಈ ಮೂಲಕ ತಾವು ಪುನಃ ನಿರ್ದೇಶಕರಾಗಿ ಮುಂದುವರೆಯುವುದಾಗಿ ತಿಳಿಸಿದರು. ಇದೆ ವೇಳೆ ಹಲವರು ಆರ್.ಎಂ.ಮಂಜುನಾಥಗೌಡ ಅವರಿಗೆ ಅಭಿನಂದನೆ ಸಲ್ಲಿಸಿದರು.
ಕಾರು ಡಿಕ್ಕಿ ಹೊಡೆದು ಆಟೋ ಪಲ್ಟಿ
SHIMOGA : ಕಾರು ಡಿಕ್ಕಿ ಹೊಡೆದು ಆಟೋ ಪಲ್ಟಿಯಾಗಿದೆ. ಶಿವಮೊಗ್ಗದ ಎಲ್ಎಲ್ಆರ್ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಆಟೋ ಶುಭಂ ಹೊಟೇಲ್ ಕಡೆಯಿಂದ ಜೈಲ್ ಸರ್ಕಲ್ ಕಡೆಗೆ ತೆರಳುತ್ತಿತ್ತು. ದುರ್ಗಿಗುಡಿ ರಸ್ತೆ ಕಡೆಯಿಂದ ಬಂದ ನ್ಯಾನೋ ಕಾರು ಆಟೋಗೆ ಡಿಕ್ಕಿ ಹೊಡೆದಿದೆ. ಆಟೋದಲ್ಲಿದ್ದ ಪ್ರಯಾಣಿಕ ಮತ್ತು ಚಾಲಕನಿಗೆ ನೋವಾಗಿದೆ. ಸ್ಥಳೀಯರು ಇಬ್ಬರನ್ನು ರಕ್ಷಿಸಿದರು.
ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಅಪಘಾತ
SHIMOGA : ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಎರಡು ಕಾರು ರಸ್ತೆ ಪಕ್ಕಕ್ಕೆ ಹೋಗಿ ತಿರುಗಿ ನಿಂತಿವೆ. ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯ ಸಕ್ರೆಬೈಲು ಗ್ರಾಮದಲ್ಲಿ ಘಟನೆ ಸಂಭವಿಸಿದೆ. ಫೋರ್ಡ್ ಇಕೋ ಕಾರಿಗೆ ಕಿಯಾ ಕಾರು ಡಿಕ್ಕಿ ಹೊಡೆದಿದೆ. ಎರಡು ಕಾರುಗಳಿಗು ಹಾನಿಯಾಗಿದೆ. ಅದೃಷ್ಟವಶಾತ್ ಯಾರಿಗೂ ತೊಂದರೆಯಾಗಿಲ್ಲ. (ಫೋಟೊ, ಮಾಹಿತಿ : ಸಂಜು ಗೌಡ)
ಶಿವಮೊಗ್ಗ – ಭದ್ರಾವತಿ ಅಭಿವೃದ್ಧಿಗೆ ಪ್ರಾಧಿಕಾರಕ್ಕೆ ಡಿಸಿ ಅಧ್ಯಕ್ಷರು
SHIMOGA : ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಅಧಿಕಾರ ವಹಿಸಿಕೊಂಡರು. ಸರ್ಕಾರದ ಸುತ್ತೋಲೆ ಅನ್ವಯ ಅಧಿಕಾರ ವಹಿಸಿಕೊಂಡಿರುವ ಜಿಲ್ಲಾಧಿಕಾರಿ, ಪ್ರಾಧಿಕಾರದ ಕೆಲಸ ಕಾರ್ಯಗಳು, ಅರೆ ಸರ್ಕಾರಿ ಪತ್ರಗಳು, ಗೌಪ್ಯ ಪತ್ರಗಳನ್ನು ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಬಹುದು ಎಂದು ತಿಳಿಸಿದ್ದಾರೆ.
ರೈಲ್ವೆ ಯೋಜನೆಗಳ ಕುರಿತು ಮಹತ್ವದ ಮೀಟಿಂಗ್
HUBBALLI : ಶಿವಮೊಗ್ಗ ಜಿಲ್ಲೆಯ ರೈಲ್ವೆ ಯೋಜನೆಗಳ ಕುರಿತು ಸಂಸದ ಬಿ.ವೈ.ರಾಘವೇಂದ್ರ ಅವರು ನೈಋತ್ಯ ರೈಲ್ವೆ ಅಧಿಕಾರಿಗಳ ಜೊತೆಗೆ ಮಹತ್ವದ ಸಭೆ ನಡೆಸಿದರು. ಶಿವಮೊಗ್ಗ, ಸಾಗರ, ತಾಳಗುಪ್ಪ ರೈಲ್ವೆ ನಿಲ್ದಾಣಗಳ ಅಭಿವೃದ್ಧಿ, ರೈಲುಗಳ ವೇಳಾಪಟ್ಟಿಯಲ್ಲಿ ಸಣ್ಣಪುಟ್ಟ ಬದಲಾವಣೆ, ಗೂಡ್ಸ್ ಯಾರ್ಡ್ ಅಭಿವೃದ್ಧಿ, ಶಿವಮೊಗ್ಗ – ಶಿಕಾರಿಪುರ – ರಾಣೆಬೆನ್ನೂರು ರೈಲ್ವೆ ಮಾರ್ಗ, ವಂದೇ ಭಾರತ್ ರೈಲು ಆರಂಭದ ಕುರಿತು ಚರ್ಚೆ ನಡೆಸಿದರು. ರೈಲ್ವೆಯ ಮಹಾ ಪ್ರಬಂಧಕ ಸಂಜೀವ್ ಮತ್ತು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ – ಬೆಂಗಳೂರು ವಂದೇ ಭಾರತ್ ರೈಲಿಗೆ ಮನವಿ
HUBBALLI : ಭವಿಷ್ಯದಲ್ಲಿ ವಂದೇ ಭಾರತ್ ರೈಲುಗಳು ಶಿವಮೊಗ್ಗದಲ್ಲಿ ಕಾರ್ಯಾಚರಣೆ ಮಾಡಲು ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುವಂತೆ ಸಂಸದ ಬಿ.ವೈ.ರಾಘವೇಂದ್ರ ರೈಲ್ವೆ ಅಧಿಕಾರಿಗಳಿಗೆ ಮನವಿ ಮಾಡಿದರು. ಬೆಂಗಳೂರು ಮತ್ತು ಶಿವಮೊಗ್ಗ ನಗರಗಳ ಮಧ್ಯೆ ವಂದೇ ಭಾರತ ರೈಲು ಸೇವೆ ಆರಂಭಿಸಲು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಹುಬ್ಬಳ್ಳಿಯಲ್ಲಿ ನಡೆದ ರೈಲ್ವೆ ಅಧಿಕಾರಿಗಳ ಸಭೆಯಲ್ಲಿ ಸಂಸದ ರಾಘವೇಂದ್ರ ಮನವಿ ಮಾಡಿದ್ದು, ಈ ಕುರಿತಂತೆ ರೈಲ್ವೆ ಮಂಡಳಿಯ ಅನುಮೋದನೆ ಪಡೆಯಲು ಕ್ರಮ ಕೈಗೊಳ್ಳುವುದಾಗಿ ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
ಫುಲ್ ನ್ಯೂಸ್ ಓದಲು ಇಲ್ಲಿ ಕ್ಲಿಕ್ ಮಾಡಿ – ಶಿವಮೊಗ್ಗ – ಬೆಂಗಳೂರು ಮಧ್ಯೆ ಸಂಚರಿಸುತ್ತಾ ವಂದೇ ಭಾರತ್ ರೈಲು? ಸಂಸದ ರಾಘವೇಂದ್ರ ಮೀಟಿಂಗ್, ಏನೇನು ಚರ್ಚೆಯಾಯ್ತು?
ಬೇಳೂರು ನಡೆಗೆ ಕನ್ನಡಿಗರಿಂದ ಶಹಬ್ಬಾಸ್ಗಿರಿ
BANGALORE : ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ ನಡೆಯುತ್ತಿದೆ. ಶಾಸಕರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ. ಸದನದಲ್ಲಿ ಮರಾಠಿ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ಮುಂದಾದ ಖಾನಾಪುರ ಕ್ಷೇತ್ರದ ಶಾಸಕ ವಿಠ್ಠಲ ಹಲಗೆಕರ್ ಅವರಿಗೆ ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತಡೆಯೊಡ್ಡಿದ್ದಾರೆ. ಕನ್ನಡ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿ ಎಂದು ತಿಳಿಸಿದ್ದಾರೆ. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಕನ್ನಡಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಅಂತರಘಟ್ಟಮ್ಮ ದೇವಿ ರಾಜಬೀದಿ ಮೆರವಣಿಗೆ
SHIMOGA : ಶಿವಮೊಗ್ಗದ ಹೊಸಮನೆ ಬಡಾವಣೆಯ ಅಂತರಘಟ್ಟಮ್ಮ ಜಾತ್ರೆ ಹಿನ್ನೆಲೆ ಉತ್ಸವ ಮೂರ್ತಿಯ ರಾಜಬೀದಿ ಉತ್ಸವ ನಡೆಯಿತು. ದುರ್ಗಿಗುಡಿ, ಜೈಲ್ ಸರ್ಕಲ್ ಮಾರ್ಗವಾಗಿ ಹೊಸಮನೆ ಬಡಾವಣೆಗೆ ಮೆರವಣಿಗೆ ನಡೆಯಿತು. ಭಕ್ತರು ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ವಿವಿಧ ಕಲಾ ತಂಡಗಳು, ದೊಡ್ಡ ಸಂಖ್ಯೆಯ ಭಕ್ತರು ಪಾಲ್ಗೊಂಡಿದ್ದರು. ರಸ್ತೆಯ ಇಕ್ಕೆಲದಲ್ಲಿ ನಿಂತು ಜನರು ದೇವಿಗೆ ನಮನ ಸಲ್ಲಿಸಿದರು.
ಹೊಸಮನೆಯಲ್ಲಿ ಜಾತ್ರೆ, ಭಕ್ತಿಯಿಂದ ಪೂಜೆ
SHIMOGA : ಹೊಸಮನೆ ಬಡಾವಣೆಯ ಅಂತರಘಟ್ಟಮ್ಮ ದೇವಿಯ ಜಾತ್ಸೋತ್ಸವ ವೈಭವದಿಂದ ನೆರೆವೇರಿತು. ದೊಡ್ಡ ಸಂಖ್ಯೆಯ ಭಕ್ತರು ಭಾಗವಹಿಸಿದ್ದರು. “ಕೋವಿಡ್ ಹಿನ್ನೆಲೆ ಕಳೆದ ಎರಡು ವರ್ಷದಿಂದ ಉತ್ಸವ ನಡೆದಿರಲಿಲ್ಲ. ದೇವಿಯ ಕೃಪೆಯಿಂದ ಕೋವಿಡ್ನಿಂದಾಗಿ ಈ ಭಾಗದಲ್ಲಿ ಯಾವುದೆ ಸಾವು ನೋವು ಆಗಲಿಲ್ಲ. ಈ ಜಾತ್ರೋತ್ಸವಕ್ಕೆ 400 ವರ್ಷಗಳಷ್ಟು ಇತಿಹಾಸವಿದೆ” ಎಂದು ದೇವಸ್ಥಾನದ ಪ್ರಮುಖರಾದ ಕೆ.ದೇವೇಂದ್ರಪ್ಪ ತಿಳಿಸಿದರು.
ಕೆಂಡ ಹಾಯ್ದು ಭಕ್ತಿ ಸಮಪರ್ಣೆ
SHIMOGA : ಶಿವಮೊಗ್ಗದ ಹೊಸಮನೆ ಬಡಾವಣೆಯ ಅಂತರಘಟ್ಟಮ್ಮ ದೇವಸ್ಥಾನದ ಜಾತ್ರೆ ಮಹೋತ್ಸವದ ಹಿನ್ನೆಲೆ ಕೆಂಡಾರ್ಚನೆ ನೆರವೇರಿಸಲಾಯಿತು. ಭಕ್ತರು ಹರಕೆ ಹೊತ್ತು ಕೆಂಡ ಹಾಯ್ದು ಭಕ್ತಿ ಸಮರ್ಪಣೆ ಮಾಡಿದರು. ಕೆಲವರು ಪೂರ್ಣ ಕುಂಭದೊಂದಿಗೆ ಕೆಂಡ ಹಾಯ್ದರು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಈ.ಕಾಂತೇಶ್ ಜಾತ್ರೆಯಲ್ಲಿ ಭಾಗಹಿಸಿದ್ದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422